ಬಾಗಲಕೋಟೆ:ಬಿವಿವಿ ಸಂಘದ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಎಚ್‌ಎಸ್‌ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಾರ್ವಜನಿಕ ಸೇವೆ 2026ರ ಜನವರಿಯಿಂದ ಆರಂಭವಾಗಲಿದೆ.
Petkarmedia:ಬಿವಿವಿ ಸಂಘದ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಎಚ್‌ಎಸ್‌ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶ್ರೀಶೈಲ ಪಠದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಮಹಾಸ್ವಾಮಿಗಳು ಭೇಟಿ ನೀಡಿದರು.
ಈ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆ ಆವರಣಕ್ಕೆ ಶ್ರೀಶೈಲ ಫೀಠದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಮಹಾಸ್ವಮಿಗಳು ಭೇಟಿ ನೀಡಿ, ಇಲ್ಲಿ ಅಳವಡಿಸಿರುವ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಹಾಗೂ ವ್ಯವಸ್ಥೆಗಳನ್ನು ವೀಕ್ಷಿಸಿ ಕಾರ್ಯವನ್ನು ಶ್ಲಾಘಿಸಿದರು. ಇದೇ ಸಂದರ್ಭದಲ್ಲಿ ಬಿವಿವಿ ಸಂಘ ಹಾಗೂ ವೈದ್ಯಕೀಯ ಕಾಲೇಜಿನ ಪರವಾಗಿ ಶ್ರೀಗಳಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
Petkarmedia: ಎಚ್‌ಎಸ್‌ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಶ್ರೀಶೈಲ ಪಠದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾದ್ಯ ಶಿವಾಚಾರ್ಯ ಮಹಾಸ್ವಾಮಿಗಳು ಭೇಟಿ ನೀಡಿ ಆಶೀರ್ವಾದ ಮಾಡಿದರು.
ಕಾರ್ಯಕ್ರಮದಲ್ಲಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ ಬೇವೂರ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ನವೀನ ಚರಂತಿಮಠ, ಪ್ರಾಚಾರ್ಯ ಡಾ. ಭುವನೇಶ್ವರಿ ಯಳಿಮಲಿ, ಉಪ ಪ್ರಾಚಾರ್ಯ ಡಾ. ಸಿ.ಎಸ್. ಹಿರೇಮಠ, ವೈದ್ಯಕೀಯ ಅಧಿಕ್ಷಕ ಡಾ. ಶ್ರೀರಾಮ ಕೋರಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನಾಲ್ಕುನೂರು ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಈ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಉಪಕರಣಗಳೊಂದಿಗೆ ವಿವಿಧ ಸುಸಜ್ಜಿತ ವಿಭಾಗಗಳನ್ನು ಸ್ಥಾಪಿಸಲಾಗಿದ್ದು, ನುರಿತ ತಜ್ಞ ವೈದ್ಯರ ತಂಡದಿಂದ ಅತಿಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ಒದಗಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ನಗರ ಹಾಗೂ ಗ್ರಾಮೀಣ ಪ್ರದೇಶದ ಜನತೆ ಈ ಆರೋಗ್ಯ ಸೇವಾ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ಅವರು ಮನವಿ ಮಾಡಿದರು.
Petkarmedia: ಸ್ಥಳೀಯ ಸುದ್ದಿಗಳಿಗಾಗಿ ನೋಡಿ


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ