ಲೋಕಾಪುರ ಸಮೀಪ ಬಸ್–ಲಾರಿ ಅಪಘಾತ

ಮುಧೋಳ: ಲೋಕಾಪುರ ಪಟ್ಟಣದ ಸಮೀಪದ ಮಲ್ಲಾಪುರ ಕ್ರಾಸ್ ಬಳಿ ಬಸ್ ಮತ್ತು ಲಾರಿ ನಡುವೆ ಭೀಕರ ಮುಖಾಮುಖಿ ಅಪಘಾತ ಬುಧವಾರ ಸಂಭವಿಸಿದೆ.


Photo Petkarmedia:ಬಸ್- ಲಾರಿ ಅಪಘಾತದಲ್ಲಿ ಜಖಂಗೊಂಡ ಬಸ್.

 ಇಳಕಲ್‌ನಿಂದ ಬೆಳಗಾವಿಗೆ ತೆರಳುತ್ತಿದ್ದ ಬಸ್ ಹಾಗೂ ಬೆಳಗಾವಿಯಿಂದ ಲೋಕಾಪುರ ಕಡೆಗೆ ಬರುತ್ತಿದ್ದ ಲಾರಿ ಪರಸ್ಪರ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಪ್ರಯಾಣಿಕರಲ್ಲಿ ಸುಮಾರು 15 ರಿಂದ 19 ಜನರಿಗೆ ಗಂಭೀರ ಗಾಯಗಳಾಗಿವೆ.

ಅಪಘಾತದ ನಂತರ ಸ್ಥಳೀಯರು ಹಾಗೂ ಪೊಲೀಸರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಲೋಕಾಪುರ ಹಾಗೂ ಬಾಗಲಕೋಟೆ ಜಿಲ್ಲಾಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅಪಘಾತದ ಮಾಹಿತಿ ತಿಳಿದ ತಕ್ಷಣ ಸಿದ್ದಾರ್ಥ್ ಗೋಯಲ್, ಜಮೀರ್ ರೋಷನ್, ಸಿಪಿಐ ಮಹಾದೇವ ಸಿರಹಟ್ಟಿ ಹಾಗೂ ಪಿಎಸ್ ಐ   ಕಾ‌ಡಪ್ಪ ಜಕ್ಕನ್ನವರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Petkarmedia.com: ಸ್ಥಳೀಯ ಸುದ್ದಿಗಳಿಗಾಗಿ ನೋಡಿ.


ಕಾಮೆಂಟ್‌ಗಳು