ಬಾಗಲಕೋಟೆ: ನಗರದ ಬಸವೇಶ್ವರ ವಿದ್ಯಾವರ್ಧಕ ಸಂಘದ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢ ವಿಭಾಗದ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
Petkarmedia: ರಾಜ್ಯಮಟ್ಟದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಡಾ. ವೀರಣ್ಣ ಚರಂತಿಮಠ ಅವರು ಸನ್ಮಾನಿಸಿದರು.
ಕುಮಾರ್ ಸಮೀರ್ ಬಾಡಗಂಡಿ ಅವರು ೫೦೦ ಮೀಟರ್ ಟ್ರಾಕ್ ಸೈಕ್ಲಿಂಗ್‌ನಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಾರ್ಖಂಡ್‌ನ ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇದೇ ರೀತಿ ಕುಮಾರ್ ಮಲ್ಲಿಕಾರ್ಜುನ್ ಚಿಂಚಲಿ ಅವರು ೧೪ ವರ್ಷ ವಯೋಮಾನ, ೩೮ ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಕುಮಾರಿ ಲಕ್ಷ್ಮಿ ಭಂಟನೂರ ಅವರು ಸೈಕ್ಲಿಂಗ್ ಅಸೋಸಿಯೇಷನ್‌ನ ರೋಡ್ ಸೈಕ್ಲಿಂಗ್ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಉತ್ತರಾಖಂಡದಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.
ಈ ಸಾಧನೆಗಾಗಿ ವಿದ್ಯಾರ್ಥಿಗಳನ್ನು ಇಂದು ಬಿವಿವಿ ಸಂಘದ ಆಡಳಿತ ಕಚೇರಿ ಆವರಣದಲ್ಲಿ ಸಂಘದ ಕಾರ್ಯಾಧ್ಯಕ್ಷರು ಸನ್ಮಾನಿಸಿ ಗೌರವಿಸಿ ಅಭಿನಂದಿಸಿದರು. ಕಠಿಣ ಪರಿಶ್ರಮ, ಶಿಸ್ತು ಮತ್ತು ನಿರಂತರ ಅಭ್ಯಾಸದಿಂದ ಇನ್ನೂ ಹೆಚ್ಚಿನ ಸಾಧನೆ ಮಾಡಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಅವರು ಹಾರೈಸಿದರು.
Petkarmedia: ಸ್ಥಳೀಯ ಸುದ್ದಿಗಳಿಗಾಗಿ ನೋಡಿ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ