ಬಾಗಲಕೋಟೆ: ಜಿಲ್ಲೆಯ ಬಾದಾಮಿ, ಪಟ್ಟದಕಲ್ಲ ಹಾಗೂ ಐಹೊಳೆ ಪ್ರವಾಸಿ ತಾಣಗಳ ಸಮಗ್ರ ಅಭಿವೃದ್ಧಿಗಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವಂತೆ ಸಂಸದ ಪಿ.ಸಿ. ಗದ್ದಿಗೌಡರ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಜರುಗಿದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೇಂದ್ರ ಪ್ರವಾಸೋದ್ಯಮ ಸಚಿವಾಲಯದ ನೆರವಿನಿಂದ ಅಂದಾಜು ₹200 ಕೋಟಿ ಮೊತ್ತದ ಸಮಗ್ರ ಡಿಪಿಆರ್ ಸಿದ್ಧಪಡಿಸುವ ಅಗತ್ಯವಿದೆ ಎಂದು ಹೇಳಿದರು. ಪ್ರವಾಸಿ ತಾಣಗಳ ವ್ಯಾಪ್ತಿಯಲ್ಲಿರುವ ಸ್ಥಳೀಯ ಅಧಿಕಾರಿಗಳನ್ನು ಪರಿಗಣಿಸಿ ಯೋಜನಾ ವರದಿ ರೂಪಿಸುವಂತೆ ಆರ್ಕಿಟೆಕ್ಟ್ ಪ್ರಶಾಂತ ಹಲಗಲಿಯವರಿಗೆ ಸೂಚನೆ ನೀಡಿದರು.
ಬಾದಾಮಿಯ ಎಪಿಎಂಸಿ ಜಮೀನಿನಲ್ಲಿ ಪಾರ್ಕಿಂಗ್ ಪ್ಲಾಜಾ ನಿರ್ಮಾಣ, ಅಲ್ಲಿಂದ ಗುಹಾಂತರ ದೇವಾಲಯಕ್ಕೆ ಸಂಪರ್ಕ ರಸ್ತೆ, ಪ್ರವಾಸಿಗರಿಗೆ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಜೊತೆಗೆ ಅಗಸ್ತ್ಯ ಹೊಂಡದ ಸುತ್ತ ಗ್ಯಾಲರಿ ಹಾಗೂ ಸಂಗೀತ ಕಾರಂಜಿ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಡಿಪಿಆರ್‌ನಲ್ಲಿ ಸೇರಿಸಿಕೊಳ್ಳುವಂತೆ ತಿಳಿಸಿದರು.
ಇದೇ ರೀತಿಯಲ್ಲಿ ಪಟ್ಟದಕಲ್ಲ ಮತ್ತು ಐಹೊಳೆ ಪ್ರವಾಸಿ ತಾಣಗಳ ಅಭಿವೃದ್ಧಿಗೂ ಸಮಗ್ರ ಯೋಜನೆ ರೂಪಿಸುವಂತೆ ಸೂಚನೆ ನೀಡಿದರು.
#BagalkotNews #Badami #Pattadakal #Aihole#TourismDevelopment #DPR #PCGaddigoudar#KarnatakaTourism #NorthKarnataka
👉 Petkarmedia ಅನ್ನು Follow ಮಾಡಿ 👍

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ