ಮುಧೋಳ:ವಿದ್ಯಾರ್ಥಿಗಳ ಸೃಜನಶೀಲತೆಗೆ ಪ್ರತಿಭಾ ಕಾರಂಜಿ ವೇದಿಕೆ

ಮುಧೋಳ ನಗರದ ಕೆ.ಆರ್. ಲಕ್ಕಂ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಇಂದು ವಿಜೃಂಭಣೆಯಿಂದ ನಡೆಯಿತು. 

Petkarmedia:ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅಬಕಾರಿ ಸಚಿವ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರು  ಮಾತನಾಡಿ,ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಕಲಾ, ಸಾಹಿತ್ಯ, ವಿಜ್ಞಾನ, ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಅಪೂರ್ವ ಪ್ರತಿಭೆಯನ್ನು ಪ್ರದರ್ಶಿಸಿದರು. ವಿವಿಧ ಪ್ರದರ್ಶನಗಳನ್ನು ವೀಕ್ಷಿಸಿದ ಸಚಿವ ತಿಮ್ಮಾಪೂರ ಅವರು ವಿದ್ಯಾರ್ಥಿಗಳ ಆತ್ಮವಿಶ್ವಾಸ ಮತ್ತು ಸೃಜನಶೀಲತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

 ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಪ್ರಾಮುಖ್ಯತೆ ನೀಡುತ್ತಿದೆ ಎಂದು ತಿಳಿಸಿದರು. ಪ್ರತಿಭಾ ಕಾರಂಜಿ ಯೋಜನೆಯ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಕ್ಕಳಲ್ಲಿರುವ ಅಡಗಿದ ಪ್ರತಿಭೆಗಳನ್ನು ಹೊರತರುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಿದರು. ಎಲ್ಲಾ ಮಕ್ಕಳಿಗೂ ಸಮಾನ ಅವಕಾಶ ಕಲ್ಪಿಸುವುದು ಸರ್ಕಾರದ ಬದ್ಧತೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಪೋಷಕರು, ಜಿಲ್ಲಾ ಶಿಕ್ಷಣಾಧಿಕಾರಿಗಳು, ಶಾಲಾ ಮಕ್ಕಳು ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು.

🏷️ #Mudhol #PratibhaKaranja #RBThimmapur #Bagalkot #StudentTalent #EducationForAll #KarnatakaEducation #Petkarmedia #SchoolEvents #StudentPower

ಕಾಮೆಂಟ್‌ಗಳು