ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಅವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
Petkarmedia:ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಎಂಬುವವರು ಮೃತಪಟ್ಟಿರುವುದು ದುರ್ಘಟನೆ ಎಂದರು. ಪ್ರಕರಣದ ತನಿಖೆಗೆ ಈಗಾಗಲೇ ಸೂಚನೆ ನೀಡಲಾಗಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬುದರ ಕುರಿತು ಕೂಡ ಸೂಕ್ತವಾಗಿ ಪರಿಶೀಲನೆ ನಡೆಸಲು ಆದೇಶಿಸಲಾಗಿದೆ ಎಂದು ಹೇಳಿದರು.
ಸತೀಶ್ ರೆಡ್ಡಿ ಅವರು ಗಾಳಿಯಲ್ಲಿ ಗುಂಡು ಹಾರಿಸಲು ಯತ್ನಿಸಿದ ಸಂದರ್ಭದಲ್ಲಿ ಅದು ರಾಜಶೇಖರ ಅವರಿಗೆ ತಗುಲಿರಬಹುದೆಂಬ ಅನುಮಾನವಿದ್ದು, ಈ ಎಲ್ಲ ಅಂಶಗಳ ಬಗ್ಗೆ ನಿಖರ ತನಿಖೆ ನಡೆಯಬೇಕಾಗಿದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಪ್ರಕರಣದ ಸತ್ಯಾಸತ್ಯತೆ ಬಹಿರಂಗಗೊಳ್ಳಲು ಕಾನೂನುಬದ್ಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ