ಬಾಗಲಕೋಟೆ: ದೌರ್ಜನ್ಯ, ಹಿಂಸೆ, ಶೋಷಣೆಗಳನ್ನು ಎದುರಿಸುತ್ತಿರುವ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಿಕ ಸಹಾಯ ಹಸ್ತ ಮತ್ತು ರಕ್ಷಣೆ ಒದಗಿಸುವ ಅಕ್ಕ ಪಡೆ ಯೋಜನೆಯ ಗಸ್ತು ವಾಹನಕ್ಕೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಬುಧವಾರ ಚಾಲನೆ ನೀಡಿದರು.
Petkarmedia:ಅಕ್ಕ ಪಡೆ ಯೋಜನೆಯ ಗಸ್ತು ವಾಹನಕ್ಕೆ ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಬುಧವಾರ ಚಾಲನೆ ನೀಡಿದರು.
ವಿದ್ಯಾಗಿರಿ ಬಿಟಿಡಿಎ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಕ್ಕ ಪಡೆ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು ಈ ಯೋಜನೆ ರಾಜ್ಯದ ಬೀದರ ಜಿಲ್ಲೆಯಲ್ಲಿ ಗೃಹ ಇಲಾಖೆಯಿಂದ ರಚಿಸಲ್ಪಟ್ಟ ಅಕ್ಕ ಪಡೆ ಯಶಸ್ಸನ್ನು ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ರಾಜ್ಯ ಮಹಿಳಾ ಗೃಹ ರಕ್ಷಕರನ್ನೊಳಗೊಂಡ ಅಕ್ಕ ಪಡೆಯನ್ನು ರಚಿಸಿ, ರಾಜ್ಯಾದ್ಯಂತ ವಿಸ್ತರಣೆಗೊಳಿಸಲಾಗಿದೆ ಎಂದರು.
ಅಕ್ಕ ಪಡೆ ಸಮಾಜದಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸಲಿದೆ. ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಘನತೆ ಮತ್ತು ಸಬಲೀಕರಣವನ್ನು ಉತ್ತೇಜಿಸಲಿದೆ. ತರಬೇತಿ ಪಡೆದ ಅಕ್ಕ ಪಡೆ ತಂಡಗಳು ಸೂಕ್ಷö್ಮ ಪ್ರದೇಶಗಳಲ್ಲಿ ಪೆಟ್ರೋಲಿಂಗ್ ಮತ್ತು ಮಹಿಳೆಯರು, ಮಕ್ಕಳನ್ನೊಳಗೊಂಡ ಸಂಕಷ್ಟದ ಕರೆಗಳಿಗೆ ತ್ವರಿತವಾಗಿ ಸ್ಪಂದಿಸುತ್ತದೆ. ಲಿಂಗ ಸಮಾನತೆ, ಮಕ್ಕಳ ರಕ್ಷಣೆ, ಕಾನೂನು ಹಕ್ಕುಗಳು, ಸಹಾಯವಾಣಿಗಳು, ಮತ್ತು ವರದಿ ಮಾಡುವ ಕಾರ್ಯವಿಧಾನಗಳಂತಹ ವಿಷಯಗಳ ಬಗ್ಗೆ ಶಾಲಾ, ಕಾಲೇಜುಗಳಲ್ಲಿ ಜಾಗೃತಿ ನಡೆಸಲಿದೆ ಎಂದರು.
ಜಿಲ್ಲಾ ಮಟ್ಟದಲ್ಲಿ ಮಹಿಳಾ ಗೃಹ ರಕ್ಷಕರನ್ನೊಳಗೊಂಡ ಅಕ್ಕ ಪಡೆ ತಂಡವು ಸ್ಥಳೀಯ ಪೊಲೀಸರ ನಿಗಟ ಸಹಯೋಗದೊಂದಿಗೆ ಬೆಳಿಗ್ಗೆ ೭ ರಿಂದ ಮಧ್ಯಾಹ್ನ ೨ ಮತ್ತು ಮಧ್ಯಾಹ್ನ ೨ ರಿಂದ ರಾತ್ರಿ ೮ ಗಂಟೆವರೆಗೆ ಎರಡು ಪಾಳೆಯದಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ತಂಡದ ಸದಸ್ಯರು ಶಾಲೆ, ಕಾಲೇಜು, ಬಾಲಕಿಯರ, ಮಹಿಳಾ ಹಾಸ್ಟೆಲ್, ಬಸ್, ರೇಲ್ವೆ ನಿಲ್ದಾಣಗಳು, ಸ್ಥಳೀಯ ಮಾರುಕಟ್ಟೆ, ಪ್ರೇಕ್ಷಣಿಯ ಸ್ಥಳಗಳು, ಪವಿತ್ರ ಸ್ಥಳಗಳು ಮತ್ತು ಇತರ ಸೂಕ್ಷö್ಮ ಸ್ಥಳಗಳಲ್ಲಿ ಗಸ್ತು ವಾಹನ ಸಂಚಾರ ಮಾಡಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲಿ ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಪೊಲೀಸ್ ಇಲಾಖೆಯ ಸಧಾಶಿವ, ಹೋಮಗಾರ್ಡ ಜಿಲ್ಲಾ ಸಮಾಧೀಷ್ಟರಾದ ಎಚ್.ಆರ್.ಕಂಬಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಡಾ.ವೀಣಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಯೋಜನೆ ನಿರ್ದೇಶಕ ಮಂಜುನಾಥ ಪರಸನ್ನವರ, ಸಿಡಿಪಿಓ ರಮೇಶ ಸೂಳಿಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ