ಬಾಗಲಕೋಟೆ:ಭಾರತದ ಆತ್ಮಶಕ್ತಿ, ಆದ್ಯಾತ್ಮ ಮತ್ತು ಸಂಸ್ಕೃತಿ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಮಹಾನ ಸಂತ ಸ್ವಾಮಿ ವಿವೇಕಾನಂದರು ಭಾರತವನ್ನು ವಿಶ್ವಗುರು ಸ್ಥಾನಕ್ಕೆ ಕೊಂಡೊಯ್ದವರು ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
Petkarmedia:ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು
ನಗರದ ಬಿವಿವಿ ಸಂಘದ ನೂತನ ಸಭಾಂಗಣದಲ್ಲಿ ಸೋಮವಾರ ಬಿಜೆಪಿ ಬಾಗಲಕೋಟೆ ಮತಕ್ಷೇತ್ರದ ವತಿಯಿಂದ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ಬೂತ್ ಅಧ್ಯಕ್ಷರ ಕಾರ್ಯಾಗಾರದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು,
“ನಮ್ಮನ್ನು ನಾವು ನಂಬದೇ ದೇವರನ್ನು ನಂಬಲು ಸಾಧ್ಯವಿಲ್ಲ. ಉನ್ನತ ಆಲೋಚನೆ, ಆದರ್ಶ ಮತ್ತು ಆತ್ಮವಿಶ್ವಾಸದಿಂದ ಮಾತ್ರ ಜೀವನದಲ್ಲಿ ಸಾಧನೆ ಸಾಧ್ಯ” ಎಂದು ಸ್ವಾಮಿ ವಿವೇಕಾನಂದರ ಸಂದೇಶವನ್ನು ಸ್ಮರಿಸಿದರು.
ಎಸ್‍ಐಆರ್ ರಾಜ್ಯ ಸಂಚಾಲಕ ಜಗದೀಶ ಹಿರೇಮನಿ ಮಾತನಾಡಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮಹತ್ವ ಹಾಗೂ ದೇಶದ ಭದ್ರತೆಗೆ ನಾಗರಿಕರ ಕರ್ತವ್ಯಗಳ ಕುರಿತು ಮಾಹಿತಿ ನೀಡಿದರು.
ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, “ಸ್ವಾಮಿ ವಿವೇಕಾನಂದರ ಆದರ್ಶಗಳಿಂದ ಪ್ರೇರಿತರಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶದ ಭದ್ರತೆ, ಸಂಸ್ಕೃತಿ ಹಾಗೂ ಧಾರ್ಮಿಕ ಮೌಲ್ಯಗಳಿಗೆ ಮಹತ್ವ ನೀಡುತ್ತಿದ್ದಾರೆ. ‘ವಸುದೈವ ಕುಟುಂಬಕಂ’ ನಮ್ಮ ಭಾರತೀಯ ಚಿಂತನೆ” ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಶಶಿ ಗುತ್ತನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ, ರಾಜು ಮುದೇನೂರ, ಉಮೇಶ ಹಂಚಿನಾಳ, ಶ್ರೀಧರ ನಾಗರಬೆಟ್ಟ, ಮಲ್ಲಿಕಾರ್ಜುನ ಮುತ್ತಪ್ಪನವರ ಸೇರಿದಂತೆ ನಗರ ಹಾಗೂ ಗ್ರಾಮೀಣ ಭಾಗದ ಬೂತ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
🏷️ #SwamiVivekanandaJayanti# BJPBagalkot #BoothAdhyakshaWorkshop #NationFirst #IndianCulture #YouthPower #VandeMataram #Petkarmedia

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ