ಬಾಗಲಕೋಟೆ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಟಕ್ಕಳಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ–218ರಲ್ಲಿ ನಡೆದಿದೆ.
Petkarmedia:ಟಕ್ಕಳಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ–218ರಲ್ಲಿ ಭೀಕರ ಅಪಘಾತ ಬೈಕ್ ಸವಾರ ಸಾವು.
ಮೃತನನ್ನು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಶಿಕಳವಾಡಿ ನಿವಾಸಿ ಶ್ರೀಕಾಂತ ತಳೆವಾಡ ಎಂದು ಗುರುತಿಸಲಾಗಿದೆ. ಕೊಲ್ಹಾರ ಕಡೆಯಿಂದ ಬೀಳಗಿ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆ ಬೀಳಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Petkarmedia: ಸ್ಥಳೀಯ ಸುದ್ದಿಗಳಿಗಾಗಿ ನೋಡಿ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ