ಹುಬ್ಬಳ್ಳಿ :ನಗರದಲ್ಲಿ ಒಂದೇ ದಿನದಲ್ಲಿ ಎರಡು ಪ್ರತ್ಯೇಕ ಪೋಕ್ಸೊ ಪ್ರಕರಣ ದಾಖಲಾಗಿವೆ.ಶಹರ ಮತ್ತು ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕರಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.
Petkarmedia: ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಶಹರ ಠಾಣೆ ವ್ಯಾಪ್ತಿಯಲ್ಲಿ ಮೂವರು ಅಪ್ರಾಪ್ತರಿಂದ ಓರ್ವ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲೈಂಗಿಕ ದೌರ್ಜನ್ಯ ಎಸಗಿದ ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಈ ಮೂವರು ಆರೋಪಿಗಳು ಕೂಡ 15-16 ವರ್ಷದವರಾಗಿದ್ದಾರೆ. ಆರೋಪಿಗಳು ವಿಡಿಯೋ ಮಾಡಿಕೊಂಡಿದ್ದರು ಎಂಬ ಬಗ್ಗೆ ಮಾಹಿತಿ ಇದೆ. ಅದರ ಬಗ್ಗೆಯೂ ಕೂಡ ತನಿಖೆ ನಡೆಸಲಾಗುತ್ತದೆ. ಪೋಷಕರು ಅಪ್ರಾಪ್ತ ಮಕ್ಕಳನ್ನು ಬಿಟ್ಟು ಹೋಗಿವಾಗ ಯೋಚನೆ ಮಾಡಬೇಕು . ಅವರ ಮೇಲೆ ಪೋಷಕರು ಗಮನಹರಿಸಬೇಕು. ಮೂವರು ಅಪ್ರಾಪ್ತ ಆರೋಪಿಗಳು ಪೋಷಕರಿಲ್ಲದ ವೇಳೆ ಅಮಾನುಷ್ಯವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಆದ್ರೆ ದೇವರ ದಯೇಯಿಂದ ಅಪ್ರಾಪ್ತ ಬಾಲಕಿಗೆ ಜೀವಕ್ಕೆ ಹಾನಿಯಾಗಿಲ್ಲ ಆರೋಗ್ಯವಾಗಿದ್ದಾಳೆ ಎಂದು ಮಾಹಿತಿ ನೀಡಿದರು.
ಮತ್ತೊಂದೆಡೆ, ಅಶೋಕ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತರಿಂದ ಓರ್ವ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಮಾಡಿದ ಘಟನೆ ನಡೆದಿದೆ. ನಿನ್ನೆ ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಅದೇ ಶಾಲೆಯ ಇಬ್ಬರು ಬಾಲಕರು ಕಿರಿಕುಳ ನೀಡಿದ್ದಾರೆ. ಆಗ ಬಾಲಕಿ ಯಾಕೆ ಕಿರುಕುಳ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದಕ್ಕೆ ಬಾಲಕಿಗೆ ಕಪಾಳಕ್ಕೆ ಹೊಡೆದಿದ್ದಾನೆ. ಅಪ್ರಾಪ್ತೆಯ ತಂದೆ ಮೇಲೂ ಹಲ್ಲೆ ಮಾಡಿದ್ದಾರೆ. ಇದರಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಅಪ್ರಾಪ್ರ ಬಾಲಕಿ ಜೊತೆ ಅನುಚಿತ ವರ್ತನೆ,ಹಾಗೂ ಹಲ್ಲೆ ಮಾಡಿರುವ ಕುರಿತಂತೆ ಎರಡು ಪ್ರಕರಣ ದಾಖಲಿಸಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ