ಬಾಗಲಕೋಟೆ:ವಿನಯ ತಿಮ್ಮಾಪೂರ ಹುಟ್ಟುಹಬ್ಬ : ಬೃಹತ್ ಉದ್ಯೋಗ ಮೇಳ

ಬಾಗಲಕೋಟೆ:ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ ತಿಮ್ಮಾಪೂರ ಅವರ ಹುಟ್ಟುಹಬ್ಬದ ಅಂಗವಾಗಿ ಜ.27 ಮತ್ತು 28ರಂದು ವಿವಿಧ ಸಾಮಾಜಿಕ ಹಾಗೂ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿನಯ ತಿಮ್ಮಾಪೂರ ಅಭಿಮಾನಿ ಬಳಗ ಹಾಗೂ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಚನ್ನು ಅಂಬಿ ಅವರು ತಿಳಿಸಿದರು.

Petkarmedia:ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಚನ್ನು ಅಂಬಿ ಅವರು ಮಾತನಾಡಿದರು.

ಶನಿವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.27ರಂದು ಬೆಳಿಗ್ಗೆ ಮುಧೋಳ ನಗರದ ವಿವಿಧ ದೇವಸ್ಥಾನಗಳಲ್ಲಿ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ಇದೇ ದಿನ ಉಚಿತ ಆರೋಗ್ಯ ತಪಾಸಣಾ ಶಿಬಿರ, ಕ್ವಿಜ್ ಸ್ಪರ್ಧೆ, ರಕ್ತದಾನ ಶಿಬಿರ ಹಾಗೂ ಹೆಲ್ಮೆಟ್ ವಿತರಣಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಜ.28ರಂದು ಬೆಳಿಗ್ಗೆ 10.30ಕ್ಕೆ ಮುಧೋಳದ ದಾನಮ್ಮದೇವಿ ಕಲ್ಯಾಣ ಮಂಟಪದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಸುಮಾರು 100ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ಈ ಮೇಳದಲ್ಲಿ 10 ಸಾವಿರಕ್ಕೂ ಅಧಿಕ ಉದ್ಯೋಗ ಅವಕಾಶಗಳು ಲಭ್ಯವಾಗಲಿದ್ದು, ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಇದಲ್ಲದೆ, ಜ.27ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ದಾನಮ್ಮದೇವಿ ದೇವಸ್ಥಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು, ನುರಿತ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ. ವಿನಯ ತಿಮ್ಮಾಪೂರ ಅವರ 31ನೇ ಹುಟ್ಟುಹಬ್ಬವನ್ನು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ವಿಶೇಷವಾಗಿ ಆಚರಿಸಲು ಅಭಿಮಾನಿ ಬಳಗ ತೀರ್ಮಾನಿಸಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವುಕುಮಾರ ಆಲಗೂರ, ಮುಖಂಡರಾದ ಯಮನಪ್ಪ ಚಿಚಖಂಡಿ, ಸಚಿನ್ ಮುಳ್ಳೂರ, ಹಣಮಂತ ತೇಲಿ, ಯಲ್ಲಾಲಿಂಗ ಅಡಿಹುಡಿ, ಕಲ್ಮೇಶ ತಳವಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿಗಳಿಗಾಗಿ:👉 Petkarmedia ಫಾಲೋ ಮಾಡಿ

#VinayTimmappur

#YouthCongress

#Bagalkot

#Mudhol

#FreeHealthCamp

#JobMela

#EmploymentOpportunities

#SocialService

#CongressParty


ಕಾಮೆಂಟ್‌ಗಳು