ಬೀಳಗಿ: ಪಟ್ಟಣದ ಕುಡಿಯುವ ನೀರು ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ವಿಧಾನಸಭೆಯಲ್ಲಿ ಒತ್ತಾಯ

ಬೀಳಗಿ: ಪಟ್ಟಣದ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ವಿಳಂಬವಿಲ್ಲದೆ ಪೂರ್ಣಗೊಳಿಸಬೇಕೆಂದು ಬೀಳಗಿ ಕ್ಷೇತ್ರದ ಶಾಸಕರಾದ J. T. Patil ಅವರು ವಿಧಾನಸಭೆಯಲ್ಲಿಂದು ಸರ್ಕಾರವನ್ನು ಒತ್ತಾಯಿಸಿದರು.

Petkarmedia: ವಿಧಾನ ಸಭೆಯಲ್ಲಿ ಶಾಸಕ ಜೆಟಿ ಪಾಟೀಲ್ ಮಾತನಾಡಿದರು.

ಪಟ್ಟಣದಲ್ಲಿ ಕುಡಿಯುವ ನೀರು ಹಾಗೂ ರಸ್ತೆ ಸಮಸ್ಯೆಗಳು ನಾಗರಿಕರಿಗೆ ತೀವ್ರ ತೊಂದರೆ ಉಂಟುಮಾಡುತ್ತಿರುವ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ನಡೆಯುತ್ತಿರುವ ಕಾಮಗಾರಿಗಳನ್ನು ಬೇಗ ಮುಗಿಸಿ ಜನರಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ಉತ್ತರಿಸಿದ ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಆದಷ್ಟು ಬೇಗ ರಸ್ತೆ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸಭಾಧ್ಯಕ್ಷರ ಮೂಲಕ ಸ್ಪಷ್ಟೀಕರಣ ನೀಡಿದರು. ಸರ್ಕಾರ ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಕಾಮೆಂಟ್‌ಗಳು