ಬಾದಾಮಿ: ಮಾನವನ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡೆಗಳು ಅವಶ್ಯಕವಾಗಿವೆ ಎಂದು ಯುವ ಮುಖಂಡ ಹಾಗೂ ಶ್ರೀ ಮೈಲಾರಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹೇಶ ಹೊಸಗೌಡ್ರ ಹೇಳಿದರು.
ಅವರು ಗುರುವಾರ ಪಟ್ಟಣದ ಜಯನಗರದಲ್ಲಿರುವ ಎಸ್.ಎಫ್. ಹೊಸಗೌಡ್ರ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲೆಯ 8ನೇ ವಾರ್ಷಿಕ ಕ್ರೀಡಾ ದಿನಾಚರಣೆ ಕಾರ್ಯಕ್ರಮವನ್ನು ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕ್ರೀಡೆಗಳಿಂದ ಶಿಸ್ತು, ಸಹಕಾರ, ಆತ್ಮವಿಶ್ವಾಸ ಬೆಳೆಯುತ್ತದೆ. ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಿ.ವಿ.ವಿ.ಎಸ್. ದೈಹಿಕ ಶಿಕ್ಷಣ ನಿರ್ದೇಶಕ ಸಿದ್ದನಗೌಡ ಗೌಡರ ಮಾತನಾಡಿ, ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಬಹುಮುಖ್ಯವಾಗಿದ್ದು, ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ನೆರವಾಗುತ್ತವೆ ಎಂದರು.
ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕ ಬಸವರಾಜ ಹಳಗೇರಿ ಕ್ರೀಡಾ ಜ್ಯೋತಿ ಬೆಳಗಿಸಿ ಮಾತನಾಡಿ, ಎಲ್ಲ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು. ಕ್ರೀಡೆಯಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರಿ ನೇಮಕಾತಿಯಲ್ಲಿ ಮೀಸಲಾತಿಯ ಸೌಲಭ್ಯವಿರುವುದನ್ನು ವಿವರಿಸಿದರು.
ಪತ್ರಕರ್ತ ಬಸವರಾಜ ಉಳಾಗಡ್ಡಿ ಮಾತನಾಡಿದರು. ವೇದಿಕೆಯಲ್ಲಿ ಪತ್ರಕರ್ತರಾದ ಶಂಕರ ಕುದರಿಮನಿ, ಗುರುನಾಥ ಹುದ್ದಾರ, ಎಚ್.ಆರ್. ಕಡಿವಾಲ, ನಿವೃತ್ತ ಶಿಕ್ಷಕ ಫಕೀರಪ್ಪ ಕುರಹಟ್ಟಿ, ಪ್ರಾಚಾರ್ಯ ಶಿವನಗೌಡ್ರ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾ ಸಾಧಕರಾದ ಶರಣು ಹುನಗುಂದ ಹಾಗೂ ಸೌಜನ್ಯಾ ಬೆಳಕಲ್ ಅವರನ್ನು ಸನ್ಮಾನಿಸಲಾಯಿತು. ನಂತರ ಶಾಲಾ ಮಕ್ಕಳಿಂದ ವಿವಿಧ ಕ್ರೀಡಾಕೂಟಗಳು ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಶಿಕ್ಷಕರು ಹಾಗೂ ಸಿಬ್ಬಂದಿ ಪಾಸುದ್ದಿಗಳಿಗಾಗಿ
ಸ್ಥಳೀಯ ಹಾಗೂ ನಿಖರ ಸುದ್ದಿಗಳಿಗಾಗಿ 👉 Petkarmedia.com ಅನ್ನು ಫಾಲೋ ಮಾಡಿ
#ಹೊಸಗೌಡ್ರಶಾಲೆ
#ಕ್ರೀಡಾದಿನಾಚರಣೆ
#BadamiNews
#EducationNews
#SchoolSports
#StudentLife
#PhysicalFitness
#MentalHealth
#Petkarmedia

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ