ಬಾಗಲಕೋಟೆಯ ನವನಗರದಲ್ಲಿರುವ ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಇಟ್ಟಿದ್ದೇವೆ ಎಂಬ ಬೆದರಿಕೆಯ ಇ-ಮೇಲ್ ಬಂದ ಹಿನ್ನೆಲೆಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ.
ನ್ಯಾಯಾಲಯದ ಅಧಿಕೃತ ಇ-ಮೇಲ್‌ಗೆ “ನಿಮ್ಮ ಜಿಲ್ಲಾ ನ್ಯಾಯಾಲಯದ ಕ್ರಿಟಿಕಲ್ ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದೇವೆ. ಮಧ್ಯಾಹ್ನದ ಊಟದ ಅವಧಿಯಲ್ಲಿ ಬ್ಲಾಸ್ಟ್ ಮಾಡಲಾಗುತ್ತದೆ” ಎಂಬ ಬೆದರಿಕೆ ಸಂದೇಶ ಬಂದ ತಕ್ಷಣ ನ್ಯಾಯಾಲಯ ಆಡಳಿತ, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿವೆ.
Petkarmedia:ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಸಂಪೂರ್ಣ ತಪಾಸಣೆ ನಡೆಸಿತು.
ನ್ಯಾಯವಾದಿಗಳು, ಕಕ್ಷಿದಾರರು, ನೌಕರಸ್ಥರು ಸೇರಿದಂತೆ ಎಲ್ಲರನ್ನು ತಕ್ಷಣ ನ್ಯಾಯಾಲಯದ ಹೊರಗೆ ಸ್ಥಳಾಂತರಿಸಲಾಗಿದ್ದು, ನ್ಯಾಯಾಲಯದ ಆವರಣದಲ್ಲಿ ಜನರು ಜಮಾಯಿಸಿದರು. ಭದ್ರತಾ ದೃಷ್ಟಿಯಿಂದ ಇಂದಿನ ಎಲ್ಲಾ ನ್ಯಾಯಾಲಯ ಕಲಾಪಗಳನ್ನು ಸ್ಥಗಿತಗೊಳಿಸಲಾಗಿದೆ.
ಘಟನಾ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಆಗಮಿಸಿ ಸಂಪೂರ್ಣ ತಪಾಸಣೆ ನಡೆಸುತ್ತಿದೆ. ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ