ಬಾಗಲಕೋಟೆ: ಗಾಯಕ ಮೈಲಾರಪ್ಪ ಮಡಿವಾಳರ (ಮ್ಯುಸಿಕ್ ಮೈಲಾರಿ) ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಜಾಮೀನು ಅರ್ಜಿಯನ್ನು ಬಾಗಲಕೋಟೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯವು ವಜಾ ಮಾಡಿದೆ.
Petkarmedia:ಬಾಗಲಕೋಟೆ ಜಿಲ್ಲಾ ನ್ಯಾಯಾಲಯಜಾಮೀನಿಗಾಗಿ ಮ್ಯುಸಿಕ್ ಮೈಲಾರಿ ಅವರು ಬಾಗಲಕೋಟೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಜಾಮೀನು ನೀಡಲು ನಿರಾಕರಿಸಿ ಅರ್ಜಿಯನ್ನು ವಜಾ ಮಾಡಿತು.
ಡಿ.18ರಂದು ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಮ್ಯುಸಿಕ್ ಮೈಲಾರಿ ಅವರನ್ನು ಬಂಧಿಸಲಾಗಿದ್ದು, ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ