ಕೆಯುಡಬ್ಲೂಜೆ ವಾರ್ಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನ

ಬಾಲಕೋಟೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲೂಜೆ)೨೦೨೪ನೇ ಸಾಲಿನ ಕೆಳಕಂಡ ವಾರ್ಷಿಕ ಪ್ರಶಸ್ತಿಗಳಿಗೆ ಪತ್ರಕರ್ತರಿಂದ  ವರ್ಷದ ವರದಿ,ಲೇಖನ,ಸುದ್ದಿ ಛಾಯಾಚಿತ್ರಗಳನ್ನು ಆಹ್ವಾನಿಸಲಾಗಿದೆ. 

ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ೩ನೇ ಮಹಡಿ, ಕಂದಾಯ ಭವನ, ಬೆಂಗಳೂರು-೦೯ ಇಲ್ಲಿಗೆ ದಿನಾಂಕ ೨೦-೦೧-೨೦೨೬ ರೊಳಗೆ ತಲುಪುವಂತೆ ತಮ್ಮ ಸ್ವ ಪರಿಚಯದೊಂದಿಗೆ ಅರ್ಜಿಯನ್ನು ಕಳುಹಿಸಿಕೊಡಬೇಕು ಎಂದು ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತಿಳಿಸಿದ್ದಾರೆ.

ಪ್ರಶಸ್ತಿಗಳ ವಿವರ:ಜಿ. ನಾರಾಯಣಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ), ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿ), ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿ), ಬಿ. ಎಸ್.ವೆಂಕಟರಾA ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿ), ಕೆ. ಎ. ನೆಟ್ಟಕಲಪ್ಪ ಪ್ರಶಸ್ತಿ (ಅತ್ಯುತ್ತಮ ಕ್ರೀಡಾ ವರದಿ), ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶೆ), ಮಂಗಳ ಎಂ. ಸಿ. ವರ್ಗಿಸ್ ಪ್ರಶಸ್ತಿ (ವಾರ ಪತ್ರಿಕೆಯಲ್ಲಿ ಚಿತ್ರ ಲೇಖನಕ್ಕೆ), ತಗಡೂರು ಕಮಲಮ್ಮ ವೀರೇಗೌಡ ಪ್ರಶಸ್ತಿ (ರೈತಾಪಿ ಜನರ ಸಮಸ್ಯೆ ವರದಿ), ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ಅತ್ಯುತ್ತಮ ವರದಿ), ಆರ್.ಎಲ್. ವಾಸುದೇವರಾವ್ ಪ್ರಶಸ್ತಿ (ವನ್ಯ ಪ್ರಾಣಿಗಳ ಕುರಿತ ಅತ್ಯುತ್ತಮ ವರದಿ), ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದವರ ಕುರಿತ ಅತ್ಯುತ್ತಮ ವರದಿ), .ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ (ಗ್ರಾಮೀಣ ಜನ-ಜೀವನದ ಅತ್ಯುತ್ತಮ ವರದಿಗೆ), ನಾಡಪ್ರಭು ಕೆಂಪೇಗೌಡ ಸ್ಮಾರಕ ಪ್ರಶಸ್ತಿ (ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆ ಅಭಿವೃದ್ಧಿ), ಯಜಮಾನ್ ಟಿ. ನಾರಾಯಣಪ್ಪ ಸ್ಮಾರಕ ಪ್ರಶಸ್ತಿ (ಜಿಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾದ ಕೃಷಿ ವರದಿ), ನಾಡಿಗೆರ ಕೃಷ್ಣರಾಯರ ಪ್ರಶಸ್ತಿ (ವಿಡಂಬನಾತ್ಮಕ ಲೇಖನಕ್ಕೆ), ಅತ್ಯುತ್ತಮ ಪುಟ ವಿನ್ಯಾಸಗಾರರು (ಡೆಸ್ಕ್ ನಲ್ಲಿ ಕೆಲಸ), ನ್ಯಾಯಾಲಯದ (ಕೋರ್ಟ್ ಬೀಟ್) ಅತ್ಯುತ್ತಮ ವರದಿ., ಸುಣ್ಣವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ. (ಅತ್ಯುತ್ತಮ ಸೇನಾ ವರದಿ), ಕೆ.ಎನ್.ಸುಬ್ರಮಣ್ಯ ಪ್ರಶಸ್ತಿ ( ಇಂಗ್ಲೀಷ್ ಪತ್ರಿಕೆಯ ವರದಿ), ಟಿ.ಕೆ.ಮಲಗೊಂಡ ಪ್ರಶಸ್ತಿ (ಅತ್ಯುತ್ತಮ ತನಿಖಾ ವರದಿ),ಚಲನಚಿತ್ರ ನಟ, ನಿರ್ದೇಶಕ ದಿ. ದ್ವಾರಕೀಶ್ ಸ್ಮಾರಕ ಪ್ರಶಸ್ತಿ (ಚಲನಚಿತ್ರ ವಿಮರ್ಶಾ ವರದಿ)

ವಿದ್ಯುನ್ಮಾನ (ಟಿವಿ)ವಿಭಾಗ:ಅತ್ಯುತ್ತಮ ತನಿಖಾ ವರದಿ, ಅತ್ಯುತ್ತಮ ಸಾಮಾಜಿಕ, ಮಾನವೀಯ ವರದಿ ಅತ್ಯುತ್ತಮ ಆ್ಯಂಕರ್ ಪ್ರಶಸ್ತಿ, ಅತ್ಯುತ್ತಮ ರಾಜಕೀಯ ವಿಶ್ಲೇಷಣೆ ವರದಿಗೆ ಅರ್ಜಿ ಆಹ್ವಾನಿಸಲಾಗಿದೆ. 

ಪ್ರಶಸ್ತಿಗೆ ೨೦೨೪ಜನವರಿ ೧ ರಿಂದ ೨೦೨೪ ಡಿಸೆಂಬರ್ ೩೧ ರೊಳಗೆ ದಿನಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ಪ್ರಕಟವಾದ ಲೇಖನ/ವರದಿ/ವಿಶೇಷ ವರದಿ ಸುದ್ದಿ ಛಾಯಾ ಚಿತ್ರಗಳನ್ನು ಕಳುಹಿಸಬೇಕು. ಈಗಾಗಲೇ ಒಂದು ಬಾರಿ ಪ್ರಶಸ್ತಿಯನ್ನು ಪಡೆದವರು, ಮತ್ತೆ ಅದೇ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ರಾಜ್ಯ ಸಂಘ, ಜಿಲ್ಲಾ ಮತ್ತು ತಾಲ್ಲೂಕು ಸಂಘದ ಪದಾಧಿಕಾರಿಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಒಬ್ಬರು ಗರಿಷ್ಠ ಮೂರು ಪ್ರಶಸ್ತಿಕ್ಕಿಂತ ಹೆಚ್ಚು ಪ್ರಶಸ್ತಿಗೆ ಅರ್ಜಿ ಸಲ್ಲಿಸುವಂತಿಲ್ಲ.

ಪ್ರಶಸ್ತಿಗೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ಕೆಯುಡಬ್ಲುಜೆ ವಿಳಾಸಕ್ಕೆ ಕಳುಹಿಸಿಕೊಡಬೇಕು.

ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ ಎಂ.ಗಾಣಿಗೇರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಕಾಮೆಂಟ್‌ಗಳು