ಬಾಗಲಕೋಟೆ:ರಾಜ್ಯಪಾಲರ ನಡೆ ಸಂವಿಧಾನಾತ್ಮಕ ಬಿಕ್ಕಟ್ಟಿಗೆ ಕಾರಣ: ಎಸ್.ಆರ್. ಪಾಟೀಲ

ಬಾಗಲಕೋಟೆ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Petkarmedia: ಮಾಜಿ ಸಚಿವ ಎಸ್.ಆರ್.ಪಾಟೀಲ್

ರಾಜ್ಯಪಾಲರು ಸಂವಿಧಾನಾತ್ಮಕ ಮುಖ್ಯಸ್ಥರಾಗಿದ್ದು, ಸಂವಿಧಾನದ ಮೌಲ್ಯಗಳು ಹಾಗೂ ಆಶಯಗಳನ್ನು ಎತ್ತಿಹಿಡಿಯುವಲ್ಲಿ ಮೊದಲಿಗರಾಗಬೇಕಾದ ಹೊಣೆಗಾರಿಕೆ ಅವರ ಮೇಲಿದೆ. ಆದರೆ ರಾಜ್ಯ ಸರ್ಕಾರದಿಂದ ಸಿದ್ಧಪಡಿಸಲಾದ ಭಾಷಣವನ್ನು ಓದಲು ನಿರಾಕರಿಸಿ ಜಂಟಿ ಅಧಿವೇಶನದಿಂದ ಹೊರನಡೆದಿರುವುದು ಅತ್ಯಂತ ಖೇದಕರ ನಡೆ ಎಂದು ಅವರು ಅಭಿಪ್ರಾಯಪಟ್ಟರು.

ರಾಜ್ಯಪಾಲರು ತಮ್ಮನ್ನು ನೇಮಕ ಮಾಡಿದ ಸರ್ಕಾರದ ತುತ್ತೂರಿಯಾಗದೆ, ಸಂವಿಧಾನದ ರಕ್ಷಕರಾಗಿ ಕಾಯ–ವಾಚ–ಮನಸ್ಸಿನಿಂದ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಈ ಘಟನೆಯಿಂದಾಗಿ ರಾಜ್ಯಪಾಲರ ವರ್ತನೆ ಸಂವಿಧಾನಾತ್ಮಕ ಬಿಕ್ಕಟ್ಟಿಗೆ ಕಾರಣವಾಗಿದೆ ಎನ್ನುವ ಭಾವನೆ ಮೂಡಿದೆ ಎಂದು ಅವರು ಹೇಳಿದರು.

ಇಂತಹ ಸಂದರ್ಭಗಳಲ್ಲಿ ದೇಶದ ಸರ್ವೋಚ್ಚ ನ್ಯಾಯಾಂಗ ಸಂಸ್ಥೆಯಾದ ಸರ್ವೋಚ್ಚ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ಮಧ್ಯಸ್ಥಿಕೆ ವಹಿಸಿ, ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕ್ರಮ ಕೈಗೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಪಾಟೀಲ ತಿಳಿಸಿದರು.

ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಮ್ಮ ಪ್ರಜಾಸತ್ತಾತ್ಮಕ ರಾಷ್ಟ್ರದಲ್ಲಿ ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಜರುಗಿಸಬೇಕು. ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಫೆಡರಲ್ ವ್ಯವಸ್ಥೆಗೆ ಧಕ್ಕೆ ಬಾರದಂತೆ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಅವರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

#ರಾಜಕೀಯ #ರಾಜ್ಯಪಾಲರು #ಸಂವಿಧಾನ #ಪ್ರಜಾಪ್ರಭುತ್ವ#FederalStructure #KarnatakaPolitics #SRPatil#PetkarmediaNews

📌 ಸ್ಥಳೀಯ ಸುದ್ದಿಗಳಿಗಾಗಿ Petkarmedia.com ಅನ್ನು ಫಾಲೋ ಮಾಡಿ

ಕಾಮೆಂಟ್‌ಗಳು