ಬಾಗಲಕೋಟೆ : ವಾಹನ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
Petkarmedia:ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತ£ನಾದ ಅವರು ವಾಹನ ಚಾಲಕರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸದೇ, ಸುರಕ್ಷಿತವಾಗಿ ವಾಹನ ಚಾಲನೆ ಮಾಡಿದಲ್ಲಿ ಅಮೂಲ್ಯ ಜೀವಗಳ ರಕ್ಷಣೆ ಮಾಡಲು ಸಾಧ್ಯವಾಗುತ್ತದೆ. ಮುಖ್ಯವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ವಾಹನ ಚಾಲಕರು ನಿಲುಗಡೆ ಸ್ಥಳಗಳಲ್ಲಿಯೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಕರೆದೊಯ್ಯುವ ಕೆಲಸ ಮಾಡಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿರುವ ಕಬ್ಬಿನ ಕಾರ್ಖಾನೆ ಮಾಲಿಕರು ಕೂಡ ತಮ್ಮ ಕಾರ್ಖಾನೆಗಳಿಗೆ ಬರುವ ಟ್ಯಾಕ್ಟರ್ ಮತ್ತು ಎತ್ತಿನ ಬಂಡಿಗಳು ರಸ್ತೆ ಬದಿ ಅಥವಾ ನಡು ರಸ್ತೆಯಲ್ಲಿ ನಿಲ್ಲಿಸದ ರೀತಿಯಲ್ಲಿ ವ್ಯವಸ್ಥೆ ಮಾಡಬೇಕು. ವಿಮೆ ಮಾಡಿಸಿರುವ ಟ್ಯಾಕ್ಟರ್‌ಗಳಿಗೆ ಮಾತ್ರ ಒಳಗಡೆ ಪ್ರವೇಶ ಎಂಬ ನಿಯಮ ಪಾಲಿಸಿದಲ್ಲಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಸರಳವಾಗಿ ಪರಿಹಾರ ಪಡೆಯಲು ಸಾಧ್ಯವಾಗುತ್ತದೆ. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಲು ಸಕ್ಕರೆ ಕಾರ್ಖಾನೆಯವರು, ವಿವಿಧ ಇಲಾಖೆ ಅಧಿಕಾರಿ ಸಿಬ್ಬಂದಿ ಎಲ್ಲರೂ ಒಗ್ಗೂಡಿ ಕಾರ್ಯನಿರ್ವಹಿಸಬೇಕು. ಪುರಸಭೆ, ನಗರಸಭೆ, ಸ್ಥಳಿಯ ಪ್ರಾಧಿಕಾರ ಅಧಿಕಾರಿಗಳು , ಚರಂಡಿ, ಒಳಚರಂಡಿ, ನಲ್ಲಿ ಸಂಪರ್ಕ ಇತ್ಯಾದಿ ಕಾಮಗಾರಿüಗಳಿಗಾಗಿ ರಸ್ತೆಗಳನ್ನು ಅಗೆದಿದ್ದಲ್ಲಿ ಶೀಘ್ರದಲ್ಲಿ ಅಂತಹ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು. ಅಂತಹ ಕಾಮಗಾರಿಗಳಿಂದಾಗಿ ಅಪಘಾತಗಳು ಸಂಭವಿಸಿ ಜೀವ ಹಾನಿ ಆದಲ್ಲಿ ಅಧಿಕಾರಿಗಳನ್ನೆ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.
ಹೆಚ್ಚುವರಿ ಪೊಲೀಸ್ ವರಿಷ್ಠಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸಿ ಅಂತ್ ಹೇಳುವುದು ಕೇವಲ ಪೊಲೀಸ್ ಇಲಾಖೆಯದ್ದು ಮಾತ್ರವಲ್ಲ, ಎಲ್ಲ ಇಲಾಖೆಗಳು ಮಾಡಬೇಕಾಗುತ್ತದೆ. ರಸ್ತೆ ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಮುಖ್ಯವಾಗಿ ಡಿ ಡಿ ಪಿ ಐ, ಡಿಡಿಪಿಯು ಹಾಗೂ ಪ್ರಥಮ ಪದವಿ ಕಾಲೇಜುಗಳ ಪ್ರಾಂಶುಪಾಲರು ತಮ್ಮ ತಮ್ಮ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಕನಿಷ್ಠ ಒಂದು ಗಂಟೆಯ ರಸ್ತೆ ಸುರಕ್ಷತಾ ನಿಯಮ ಪಾಲಿಸುವ ಕುರಿತು ಹದಿನೈದು ದಿನಕೊಮ್ಮೆಯಾದರು ಪಾಠ ಭೋದಿಸಿದಲ್ಲಿ ವಿದ್ಯಾರ್ಥಿಗಳಿಗೆ ಮನವರಿಕೆಯಾಗುತ್ತದೆ ಮತ್ತು ಆ ಮಕ್ಕಳು ಕೂಡ ತಮ್ಮ ಮನೆಯ ಸದಸ್ಯರು ಹಾಗೂ ಪಾಲಕರಿಗೆ ಹೇಳುವ ಮೂಲಕ ಅರಿವು ಮೂಡುತ್ತದೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯವರು ರಸ್ತೆ ನಿಮಾಣಕ್ಕೆ ಆಸಕ್ತಿ ತೋರಿದಷ್ಟು ರಸ್ತೆ ಸುರಕ್ಷತೆಗೆ ಯಾವ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರತ್ತ ಕೂಡ ಅಷ್ಟೇ ಆಸಕ್ತಿ ವಹಿಸಬೇಕು. ಅಪಘಾತ ಸ್ಥಳಗಳಿಗೆ ಭೇಟಿ ನೀಡಿ ಅಧ್ಯಯನ ಮಾಡಿ ಅಪಘಾತಗಳು ಸಂಭವಿಸದAತೆ ಯಾವ ಯಾವ ಕ್ರಮ ಕೈಗೊಳ್ಳಬೇಕು ಎಂಬುದರ ಕುರಿತು ವರದಿ ನೀಡಿ ಎಲ್ಲರೂ ತಮ್ಮ ಜವಾಬ್ದಾರಿಗಳನ್ನು ನಿಭಾಯಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಬಾಗಲಕೋಟ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಕೆ.ದುರ್ಗಾದಾಸ, ಜಿಲ್ಲಾ ಆರೋಗ್ಯಾಧಿಕಾರಿ ಡಾ,ಮಂಜುನಾಥ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ