ಬಾಗಲಕೋಟೆ: ನಗರದ ಬಸವೇಶ್ವರ ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ನ್ಯೂ ಹೈಸ್ಕೂಲ್ ಬಾಗಲಕೋಟೆ ಶಾಲೆಯ ವಿದ್ಯಾರ್ಥಿನಿಯರಾದ ಸಹನಾ ಮುತ್ತಾಲ ಮತ್ತು ವೈಷ್ಣವಿ ದಾಸನ್ನವರ್ ಅವರು ಪ್ರಾಥಮಿಕ ವಿಭಾಗದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಹಾಗೂ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
Petkarmedia:ಕ್ರೀಡೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಅಭಿನಂದನೆ ಸಲ್ಲಿಸಿದರು.
ಈ ಸಾಧನೆಯ ಪ್ರಯುಕ್ತ ಬಿವಿವಿ ಸಂಘದ ಆಡಳಿತ ಕಚೇರಿ ಆವರಣದಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿತ್ತು. ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಚರಂತಿಮಠ ಅವರು ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷರಾದ ಮಹಾಂತೇಶ್ ಶೆಟ್ಟರ, ಪದನಿಮಿತ್ತ ಕಾರ್ಯದರ್ಶಿಗಳಾದ ಕೆ.ಹೆಚ್. ಹೊಸೂರ, ಪ್ರಾಚಾರ್ಯರಾದ ಆರ್.ಎನ್. ಜೋಷಿ, ದೈಹಿಕ ಶಿಕ್ಷಕರು ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ