ಬಾಗಲಕೋಟೆ ಸಹಾಯಕ ಆಯುಕ್ತರು ಹಾಗೂ ಜಿಲ್ಲಾ ಅಂಕಿತ ಅಧಿಕಾರಿಗಳ ನಿರ್ದೇಶನದ ಮೇರೆಗೆ ಬಾಗಲಕೋಟೆ ನವನಗರದ ವಿವಿಧ ಹೋಟೆಲ್ಗಳಿಗೆ ಅಧಿಕಾರಿಗಳು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅನಧಿಕೃತವಾಗಿ ಬಳಕೆ ಮಾಡಲಾಗುತ್ತಿದ್ದ 9 ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
Petkarmedia:9 ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು.ತಹಶೀಲದಾರರಾದ ವಾಸುದೇವ ವಿ.ಸ್ವಾಮಿ , ಎಂ.ಜಿ. ಬಿರಾದಾರ, ಆಹಾರ ಶಿರಸ್ತೇದಾರ ಎಸ್.ಆರ್. ಗಯ್ಯಾಳಿ ಹಾಗೂ ಆಹಾರ ಸುರಕ್ಷತಾ ಅಧಿಕಾರಿ ಸಾಳಗುಂದಿ ಅವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದರು.
ಪರಿಶೀಲನೆ ವೇಳೆ ಕೆಲ ಹೋಟೆಲ್ಗಳಿಂದ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗಿದೆ. ಅವಧಿ ಮೀರಿದ ಆಹಾರ ವಸ್ತುಗಳನ್ನು ಬಳಸದಂತೆ ಹೋಟೆಲ್ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ತಹಶೀಲದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ