ಬಾಗಲಕೋಟೆ : ಬೀದಿ ನಾಯಿಗಳಿಂದ ದಾಳಿಗೊಳಗಾಗಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾಳೆ.ಅಲೈನಾ ಲೋಕಾಪೂರ ಎಂಬ ಬಾಲಕಿ ಬೀದಿ ನಾಯಿ ದಾಳಿಗೊಳಗಾಗಿ ಮೃತಪಟ್ಟಿದ್ದಾಳೆ. ಡಿಸೆಂಬರ್ 29 ರಂದು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ.ನವನಗರದ ಸೆಕ್ಟರ್ ನಂ.15ರಲ್ಲಿರುವ ಮನೆಯೆದು ಆಟವಾಡುತ್ತಿದ್ದ ಬಾಲಕಿ ಮೇಲೆ ದಾಳಿ ನಡೆಸಿದ್ದ ನಾಯಿಗಳು ಕಣ್ಣು, ಮೂಗು ಸೇರಿದಂತೆ ಮುಖದ ಮೇಲೆ ತೀವ್ರತರವಾಗಿ ಗಾಯಗೊಳಿಸಿದ್ದವು.
Petkarmedia: ಬೀದಿ ನಾಯಿಗಳಿಂದ ದಾಳಿಗೊಳಗಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಾಲಕಿ ಅಲೈನಾ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ