ಸಿದ್ದರಾಮಯ್ಯರ ಐತಿಹಾಸಿಕ ಸಾಧನೆಗೆ ಸಂಭ್ರಮಾಚರಣೆ

ಮುಧೋಳ :ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಅವರು ಮಂಗಳವಾರ ಮುಧೋಳ ನಗರದ ಬಸವೇಶ್ವರ ವೃತ್ತದಲ್ಲಿ, ಕರ್ನಾಟಕ ಇತಿಹಾಸದಲ್ಲಿ ಅತೀ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿ ಹೊಸ ದಾಖಲೆ ಬರೆಯುತ್ತಿರುವ ಸಿದ್ದರಾಮಯ್ಯ ಅವರ ಐತಿಹಾಸಿಕ ಸಾಧನೆಯನ್ನು ಸಂಭ್ರಮದಿಂದ ಆಚರಿಸಿದರು.

Petkarmedia:ಮುಧೋಳ ನಗರದ ಬಸವೇಶ್ವರ ವೃತ್ತದಲ್ಲಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದರು.

ಸಚಿವ ತಿಮ್ಮಾಪೂರ ಅವರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು ಹಾಗೂ ಯುವಜನರ ಜೀವನದಲ್ಲಿ ವಿಪ್ಲವಾತ್ಮಕ ಬದಲಾವಣೆ ತಂದಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅವರ ಜನಪರ ಆಡಳಿತ ಹಾಗೂ ದೀರ್ಘಕಾಲದ ಸೇವೆ ರಾಜ್ಯದ ಇತಿಹಾಸದಲ್ಲಿ ಚಿರಸ್ಮರಣೀಯವಾಗಿರಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮವನ್ನು ಇನ್ನಷ್ಟು ಮೆರೆದರು.

ಕಾಮೆಂಟ್‌ಗಳು