ಬಾಗಲಕೋಟೆ : ಪ್ರಧಾನಮಂತ್ರಿ ಮತ್ಸ್ಯ ಸಂಪದ ಪ್ರಧಾನಮಂತ್ರಿ ಮತ್ಸ ಸಂಪದ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಕಾರ್ಯಕ್ರಮದಡಿ ಮೀನುಗಾರಿಗೆ ಮೀನು ಮಾರಾಟಕ್ಕಾಗಿ ಐಸ್ ಬ್ಯಾಂಕ್ ನೊಂದಿಗೆ ದ್ವಿಚಕ್ರವಾಹನ ಖರೀದಿಗೆ ೨೦೨೫-೨೬ನೇ ಸಾಲಿನ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸಾಂದರ್ಭಿಕ ಚಿತ್ರ.
ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದ ಮುಧೋಳ ತಾಲೂಕಿನ ಹಲಗಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲಗಲಿ ಗ್ರಾಮದ ಪರಿಶಿಷ್ಟ ಪಂಗಡದ ಮೀನುಗಾರರು ಮೀನುಗಾರರ ಸಹಕಾರ ಸಂಘದ ಸದಸ್ಯರಾಗಿರಬೇಕು ಅಥವಾ ಮೀನುಗಾರಿಕೆ ವೃತ್ತಿಯಲ್ಲಿ ತೊಡಗಿರುವ ಪರಿಶಿಷ್ಟ ಪಂಗಡದ ಮೀನುಗಾರರಾಗಿರುವವರು ಜನವರಿ 27 ರೊಳಗಾಗಿ ಅರ್ಜಿಯನ್ನು ಜಮಖಂಡಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊನಂ.9886820761 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ