ಸ್ಪರ್ಧಾರ್ಥಿಗಳಿಗೆ ತರಬೇತಿ ಕಾರ್ಯಾಗಾರ: ಜಿಪಂ ಸಿಇಒ

ಬಾಗಲಕೋಟೆ: ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾರ್ಥಿಗಳಿಗಾಗಿ ಜನವರಿ 8ರಂದು ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಓ   ಶಶಿಧರ ಕುರೇರ ತಿಳಿಸಿದ್ದಾರೆ.

Petkarmedia:ಜಿಪಂ ಸಿಇಓ  ಶಶಿಧರ ಕುರೇರ

ಈ ಕುರಿತು ಮಾಹಿತಿ ನೀಡಿದ ಅವರು, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಬಾಗಲಕೋಟೆ ಸಹಯೋಗದಲ್ಲಿ ಕಾರ್ಯಾಗಾರ ನಡೆಯಲಿದ್ದು, ಹಿರಿಯ ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳು ಮತ್ತು ನುರಿತ ವಿಷಯ ತಜ್ಞರು ಭಾಗವಹಿಸಲಿದ್ದಾರೆ ಎಂದರು. ಸ್ಪರ್ಧಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕೋರಿದರು.


Petkarmedia: ಸ್ಥಳೀಯ ಸುದ್ದಿಗಳಿಗಾಗಿ ನೋಡಿ.


ಕಾಮೆಂಟ್‌ಗಳು