ಚಿರತೆ ಆತಂಕ: ಬೋನು–ಕ್ಯಾಮರ ಹೆಚ್ಚಿಸಲು ಶಾಸಕ ಗುಡಗುಂಟಿ ನಿರ್ದೇಶನ

ಜಮಖಂಡಿ: ತುಬಚಿ, ತುಂಗಳ ಹಾಗೂ ಜುಂಝರವಾಡ ಗ್ರಾಮಗಳಲ್ಲಿ ಕೆಲ ದಿನಗಳಿಂದ ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಭೀತಿ ಮೂಡಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ  ಶಾಸಕ ಜಗದೀಶ್ ಗುಡಗುಂಟಿ ಅವರು ಜಿಲ್ಲಾ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ತ್ವರಿತಗೊಳಿಸುವಂತೆ ಸೂಚಿಸಿದರು.

Petkarmedia: ಚಿರತೆ ಹೆಜ್ಜೆಗಳ ಗುರುತಿಸುತ್ತಿರುವುದು.

Petkarmedia:ಶಾಸಕ ಜಗದೀಶ್ ಗುಡಗುಂಟಿ ಅವರು ಜಿಲ್ಲಾ ಅರಣ್ಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಚಿರತೆ ಹಿಡಿಯಲು ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸುವುದು, ಬೋನುಗಳು ಹಾಗೂ ಕ್ಯಾಮರಗಳ ಅಳವಡಿಕೆಯನ್ನು ವಿಸ್ತರಿಸುವುದು, ಗಸ್ತು ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸುವಂತೆ ಶಾಸಕರು ನಿರ್ದೇಶನ ನೀಡಿದರು. ಜನರ ಸುರಕ್ಷತೆ ಮೊದಲ ಆದ್ಯತೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಊರಿನ ಹಿರಿಯರು, ರೈತರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು