ಬಾದಾಮಿ ಬಸ್ ನಿಲ್ದಾಣದಲ್ಲಿ ಕೃಷಿ–ಅರಣ್ಯ ಜಾಗೃತಿ ಬೀದಿನಾಟಕ

ಬಾದಾಮಿ: ಕೃಷಿ ಹಾಗೂ ಅರಣ್ಯ ಇಲಾಖೆಯ ವಿವಿಧ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸೋಮವಾರ ನಗರದ ಬಸ್ ನಿಲ್ದಾಣದಲ್ಲಿ ಬೀದಿನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಯಿತು.

Petkarmedia:ಸಂಸ್ಕೃತಿಕ ತಂಡದಿಂದ ಕೃಷಿ–ಅರಣ್ಯ ಅರಿವು ಪ್ರದರ್ಶನ

ಅರಣ್ಯ ಇಲಾಖೆ, ಸಾಮಾಜಿಕ ಅರಣ್ಯ ವಲಯ, ವಲಯ ಅರಣ್ಯಾಧಿಕಾರಿಗಳ ಕಚೇರಿ, ಶ್ರೀ ಅಂಭಾಭವಾನಿ ಗೊಂಧಳಿ ಕಲಾವಿದರ ಹಾಗೂ ಸಾಂಸ್ಕೃತಿಕ ಸಂಘದ ಸಹಯೋಗದಲ್ಲಿ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಈ ಕಾರ್ಯಕ್ರಮ ಆಯೋಜಿಸಲಾಯಿತು. ಇಲಾಖಾ ನರ್ಸರಿಗಳಲ್ಲಿ ಬೆಳೆಸಿದ ವಿವಿಧ ಜಾತಿಯ ಸಸಿಗಳನ್ನು ರೈತರು ಹಾಗೂ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ಪೂರೈಕೆ ಮಾಡಲಾಗುತ್ತಿದೆ ಎಂಬ ಮಾಹಿತಿ, ಬೆಂಕಿಯಿಂದ ಅರಣ್ಯ ರಕ್ಷಣೆ, ವನ್ಯಜೀವಿಗಳ ಸಂರಕ್ಷಣೆ ಹಾಗೂ ಅರಣ್ಯ ನಾಶದಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಬೀದಿನಾಟಕದ ಮೂಲಕ ಅರಿವು ಮೂಡಿಸಲಾಯಿತು.

ಈ ಸಂದರ್ಭದಲ್ಲಿ ವಲಯ ಸಾಮಾಜಿಕ ಅರಣ್ಯಾಧಿಕಾರಿ ಎಸ್.ಬಿ. ಪೂಜಾರ, ಉಪವಲಯ ಅರಣ್ಯಾಧಿಕಾರಿ ಎಂ.ಜಿ. ಜಗದಾಳ, ಹುಸೇನಬಾದಶಾ ಯರಗಲ್, ಘಟಕ ವ್ಯವಸ್ಥಾಪಕ ಅಶೋಕ ಕೋರಿ, ನಿಸರ್ಗ ಬಳಗದ ಅಧ್ಯಕ್ಷ ಎಸ್.ಎಚ್. ವಾಸನ ಸೇರಿದಂತೆ ಹಲವರು ಉಪಸ್ಥಿತರಿದ್ದು ಮಾತನಾಡಿದರು.

ಬೀದಿನಾಟಕವನ್ನು ವೀಕ್ಷಿಸಿದ ಸಾರ್ವಜನಿಕರು, ಸರಳ ಹಾಗೂ ಪರಿಣಾಮಕಾರಿಯಾಗಿ ಇಲಾಖೆಯ ಮಾಹಿತಿ ನೀಡಿದ ಕಾರ್ಯಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.


Petkarmedia: ಸ್ಥಳೀಯ ಸುದ್ದಿಗಳಿಗಾಗಿ ನೋಡಿ

ಕಾಮೆಂಟ್‌ಗಳು