ಬಾಗಲಕೋಟೆ : ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ನಾಲ್ಕು ಟ್ರ್ಯಾಕ್ಟರ್‌ಗಳು ಬೆಂಕಿಗಾಹುತಿಯಾಗಿರುವ ಸರಣಿಯಲ್ಲಿ ಇದೀಗ ಮತ್ತೊಂದು ದುರ್ಘಟನೆ ಬೆಳಕಿಗೆ ಬಂದಿದೆ.
Petkarmedia: ಬೆಂಕಿಗೆ ಆಹುತಿಯಾದ ಟ್ರ್ಯಾಕ್ಟರ್ಜಮಖಂಡಿ ತಾಲ್ಲೂಕಿನ ಟಕ್ಕಳಕಿ–ಸಾವಳಗಿ ಗ್ರಾಮಗಳ ಮಧ್ಯೆ ಕಬ್ಬಿನ ರವದಿ (ಸೊಪ್ಪು) ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ವಿದ್ಯುತ್ ಕಂಬದ ಮೇಲ್ತಂತಿ ತಗುಲಿದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ.
ಟಕ್ಕಳಕಿ ಗ್ರಾಮದ ವಸಂತ ಚೌಹಾಣ್ ಅವರಿಗೆ ಸೇರಿದ ಟ್ರ್ಯಾಕ್ಟರ್‌ನಲ್ಲಿ ಅಚಾನಕ್ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದಿದ್ದು, ಟ್ರ್ಯಾಕ್ಟರ್ ಎಂಜಿನ್, ಟ್ರೇಲರ್ ಹಾಗೂ ಕಬ್ಬಿನ ಸೊಪ್ಪು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಟ್ರ್ಯಾಕ್ಟರ್ ಉಳಿಸಿಕೊಳ್ಳಲು ರೈತ ಹರಸಾಹಸ ಪಟ್ಟರೂ ಪ್ರಯೋಜನವಾಗಿಲ್ಲ.
ಬೆಂಕಿ ಆರಿಸಲು ಸ್ಥಳೀಯರು ಯತ್ನಿಸಿದರೂ ವಿಫಲವಾಗಿದ್ದು, ನೋಡ ನೋಡ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಸೊಪ್ಪು ಸಂಪೂರ್ಣವಾಗಿ ನಾಶವಾಗಿದೆ. ಈ ಘಟನೆಯಲ್ಲಿ ಸುಮಾರು ೮–೯ ಲಕ್ಷ ರೂಪಾಯಿ ನಷ್ಟ ಸಂಭವಿಸಿರುವ ಅಂದಾಜು ಮಾಡಲಾಗಿದೆ.
ಟಕ್ಕಳಕಿಯಿಂದ ಸಾವಳಗಿ ಕಡೆ ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಈ ಅವಘಡ ಸಂಭವಿಸಿದ್ದು, ಘಟನೆ ಸಾವಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ