ಬಾಗಲಕೋಟೆ: ಅವಸರವೇ ಅಪಘಾತಕ್ಕೆ ಪ್ರಮುಖ ಕಾರಣವಾಗುತ್ತಿರುವ ಹಿನ್ನೆಲೆಯಲ್ಲಿ ವಾಹನ ಚಾಲಕರು ನಿಧಾನವಾಗಿ ಚಾಲನೆ ಮಾಡಿ ಸಂಚಾರ ನಿಯಮಗಳನ್ನು ಪಾಲಿಸಬೇಕು. ನಿಮ್ಮ ಕುಟುಂಬ ಸದಸ್ಯರು ಹಾಗೂ ಮಕ್ಕಳು ಮನೆಯಲ್ಲೇ ನಿಮ್ಮನ್ನು ಕಾಯುತ್ತಿದ್ದಾರೆ ಎಂಬುದನ್ನು ಮರೆಯಬೇಡಿ ಎಂದು ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕು ವ್ಯಾಪ್ತಿಯ ಅನಗವಾಡಿ ಗ್ರಾಮದ ಕೋತ್ ಪೆಟ್ರೋಲ್ ಬಂಕ್ ಹತ್ತಿರ ಟ್ರ್ಯಾಕ್ಟರ್ ಹಾಗೂ ಲಾರಿ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿತು. ಅಪಘಾತದ ಪರಿಣಾಮ ಲಾರಿ ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದನು.
ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಬೀಳಗಿ ಅಗ್ನಿಶಾಮಕ ಇಲಾಖೆಗೆ ದೂರವಾಣಿ ಮೂಲಕ ಮಾಹಿತಿ ನೀಡಿದರು. ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಜಲವಾಹನದೊಂದಿಗೆ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿ, ಕಾರ್ಯಪ್ರವೃತ್ತರಾಗಿ ಲಾರಿಯಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಹೊರತೆಗೆದರು.
ಅನಗವಾಡಿ ಗ್ರಾಮದ ಹಿರಿಯರು ಹಾಗೂ ಪ್ರತ್ಯಕ್ಷದರ್ಶಿಗಳು, ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿ ಮಾನವೀಯ ಕಾರ್ಯಾಚರಣೆ ನಡೆಸಿದ ಬೀಳಗಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಹಾಗೂ ಅಧಿಕಾರಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದರು. ಅಲ್ಲದೇ ಕಾರ್ಯಾಚರಣೆಯಲ್ಲಿ ಸಹಕರಿಸಿದ ಸ್ಥಳೀಯರಿಗೂ ಕೃತಜ್ಞತೆ ಸಲ್ಲಿಸಿದರು

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ