ಬಾಗಲಕೋಟೆ: ಮೇಡಿಕಲ್ ಕಾಲೇಜಿನ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಶೀಘ್ರದಲ್ಲೇ ಹಮ್ಮಿಕೊಳ್ಳಲಾಗುವುದು. ಮುಳುಗಡೆ ಜಮೀನು ಪರಿಹಾರ ವಿತರಣೆಗೆ ಸಂಬಂಧಿಸಿ ಮುಖ್ಯಮಂತ್ರಿಗಳಿಂದ ದಿನಾಂಕ ನಿಗದಿಗೆ ಮನವಿ ಮಾಡಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ಜಿಲ್ಲಾ ಕ್ರೀಡಾಂಗಣದ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಳುಗಡೆ ಜಮೀನು ಪರಿಹಾರ ವಿತರಣೆಗೆ ಸಮಯಾವಕಾಶವನ್ನು ಪರಿಗಣಿಸಿ ಸೂಕ್ತ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು. ದೇಶವು ಅಭಿವೃದ್ಧಿಯ ಪಥದಲ್ಲಿ ಮುಂದುವರಿಯಬೇಕಿದ್ದು, ಜನರನ್ನು ದುರುಪಯೋಗಪಡಿಸಿಕೊಳ್ಳುವ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂಬುದು ಸರ್ಕಾರದ ನಿಲುವಾಗಿದೆ ಎಂದು ಹೇಳಿದರು.
ಉದ್ಯೋಗ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸರ್ಕಾರ ನಿರಂತರ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ದೇಶವನ್ನು ಸಮರ್ಥವಾಗಿ ಮುನ್ನಡೆಸಲಾಗುತ್ತಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.
ಪ್ರವಾಸೋದ್ಯಮ ಅಭಿವೃದ್ಧಿಯ ಹಿನ್ನಲೆಯಲ್ಲಿ ಸಂಸದರು ನಾಳೆ ಸಭೆ ಕರೆದಿದ್ದು, ಆ ಸಭೆಯಲ್ಲಿ ಅಗತ್ಯ ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು. ಹಿಪ್ಪರಗಿ ಬ್ಯಾರೇಜ್‌ಗೆ ಸುರಕ್ಷತಾ ದೃಷ್ಟಿಯಿಂದ ಹೊಸ ಗೇಟ್ ಅಳವಡಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಅನಾಹುತ ಸಂಭವಿಸುವ ಮೊದಲು ಕ್ರಮ ಕೈಗೊಳ್ಳಬೇಕಾಗಿದ್ದರೂ ಈ ವಿಷಯದಲ್ಲಿ ಲೋಪವಾಗಿದೆ. ಆದರೂ ಇದೀಗ ತಕ್ಷಣವೇ ಹೊಸ ಗೇಟ್ ಅಳವಡಿಸಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
📍 ಸ್ಥಳೀಯ ಸುದ್ದಿಗಳಿಗಾಗಿ
👉 Petkarmedia ಫಾಲೋ ಮಾಡಿ
#Bagalkot #Petkarmedia #LocalNews #MedicalCollege #Compensation #HipperagiBarrage

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ