ಬಾಗಲಕೋಟೆ:ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಮನೆ ಕಳೆದುಕೊಳ್ಳುವ ಕುಟುಂಬಗಳಿಗೆ 11 ಲಕ್ಷ ಪರಿಹಾರ ನೀಡುವಂತೆ ಮನವಿ

ಬಾಗಲಕೋಟೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಡಿಯಲ್ಲಿ ಮನೆಗಳನ್ನು ಕಳೆದುಕೊಳ್ಳುತ್ತಿರುವ ನಗರದ ದೊಡ್ಡ ಸಾಬಣ್ಣ ಹಾಗೂ ತುಮಕೂರು ಓಣಿಗಳ ನಿವಾಸಿಗಳಿಗೆ ಸಮರ್ಪಕ ಪುನರ್ವಸತಿ ಕಲ್ಪಿಸಿ, ಬೆಂಗಳೂರಿನ ಕೋಗಿಲು ಪ್ರದೇಶದ ಜನರಿಗೆ ನೀಡಿದ ಮಾದರಿಯಲ್ಲಿ ಪ್ರತಿ ಕುಟುಂಬಕ್ಕೂ 11 ಲಕ್ಷ ರೂಪಾಯಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಲಾಗಿದೆ.


ಈ ಕುರಿತು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ) ವತಿಯಿಂದ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ ಅವರು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.

ಮನೆ ಕಳೆದುಕೊಳ್ಳುವ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ ಸರ್ಕಾರ ಮಾನವೀಯ ದೃಷ್ಟಿಯಿಂದ ಕ್ರಮ ಕೈಗೊಂಡು ಸೂಕ್ತ ಪರಿಹಾರ ಹಾಗೂ ಪುನರ್ವಸತಿ ವ್ಯವಸ್ಥೆ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಕಾಮೆಂಟ್‌ಗಳು