ಬಾಗಲಕೋಟೆ: ಶಿವಾಜಿ ಮೆರವಣಿಗೆ ವೇಳೆ ನಡೆದ ಗಲಭೆ ಹಾಗೂ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ. ಶ್ರೀರಾಮುಲು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಹಿಂದೂ ಕಾರ್ಯಕರ್ತರು ಏನ್ ತಪ್ಪು ಮಾಡಿದ್ದಾರೆ? ಅವರನ್ನು ಏಕೆ ಬಂಧಿಸಿದ್ದಾರೆ? ಅವರು ಯಾವುದೇ ತಪ್ಪು ಮಾಡಿಲ್ಲ,” ಎಂದು ಪ್ರಶ್ನಿಸಿದರು.
ಮೆರವಣಿಗೆ ವೇಳೆ ಕಲ್ಲು ಹಾಗೂ ಚಪ್ಪಲಿ ತೂರಾಟ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಅವರು, ಗಲಭೆ ಸೃಷ್ಟಿಸಿದವರನ್ನು ಬಿಡಬಾರದು ಎಂದರು. ತಪ್ಪು ಮಾಡದೇ ಇರುವ ಹಿಂದೂ ಕಾರ್ಯಕರ್ತರನ್ನು ಬಂಧಿಸಿರುವುದು ಸರಿಯಲ್ಲ ಎಂದು ಹೇಳಿದರು.
ಇದೇ ವೇಳೆ ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, “ಎಸ್‌ಪಿ ಹಾಗೂ ಐಜಿಪಿಗೆ ವಾರ್ನಿಂಗ್ ಮಾಡ್ತೀನಿ. ನಿರಪರಾಧಿಗಳನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲವಾದರೆ ಪರಿಣಾಮ ಎದುರಿಸಬೇಕಾಗುತ್ತದೆ. ನಾವು ಸುಮ್ಮನೆ ಇರಲ್ಲ. ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುತ್ತೇವೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ