ಬಾಗಲಕೋಟೆ:ಮಹಿಳಾ ಸ್ವ-ಸಹಾಯ ಸಂಘಗಳ ಶ್ರಮ ಶ್ಲಾಘಿಸಿದ ಜಿ.ಪಂ ಸಿಇಒ ಶಶಿಧರ ಕುರೇರ್

ಬಾಗಲಕೋಟೆ  : ಜಿಲ್ಲೆಯ ಸ್ವ-ಸಹಾಯ ಸಂಘಗಳ ಸದಸ್ಯರುಗಳು ಉತ್ಪಾದಿಸಿದ ವಿವಿಧ ಉತ್ಪನ್ನಗಳ ಪ್ಯಾಕೇಜಿಂಗ್ ಮತ್ತು ಬ್ರಾಂಡಿಂಗ್‌ಗಳನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ವೀಕ್ಷಣೆ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.

 ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಶನಿವಾರ ಹಮ್ಮಿಕೊಂಡ ವಿವಿಧ ಸ್ವ-ಸಹಾಯ ಸಂಘದ ಸದಸ್ಯರುಗಳು ಉತ್ಪಾದಿಸಿದ ಉತ್ಪನ್ನಗಳ ಪ್ರದರ್ಶನವನ್ನು ವೀಕ್ಷಣೆ ಮಾಡಿ, ಮಹಿಳಾ ಸ್ವ-ಸಹಾಯ ಸಂಘಗಳು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿ ಗುಣಮಟ್ಟದ ಹಾಗೂ ಮಾರುಕಟ್ಟೆಗೆ ಹೊಂದುವ ಉತ್ಪನ್ನಗಳನ್ನು ತಯಾರಿಸುತ್ತಿರುವುದು ಶ್ಲಾಘನೆ ವ್ಯಕ್ತಪಡಿಸಿದರು. 

 ಇಂತಹ ಉತ್ಪಾದನಾ ಚಟುವಟಿಕೆಗಳು ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಯನ್ನು ಹೆಚ್ಚಿಸುವುದರ ಜೊತೆಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತವೆ.

ಮುಂದಿನ ದಿನಗಳಲ್ಲಿ ಉತ್ಪನ್ನಗಳ ಮಾರುಕಟ್ಟೆ ಸಂಪರ್ಕ, ಪ್ಯಾಕೇಜಿಂಗ್ ಮತ್ತು ಬ್ರಾಂಡಿAಗ್‌ಗೆ ಅಗತ್ಯ ಸಹಕಾರ ನೀಡಲಾಗುವುದೆಂದು ಭರವಸೆ ನೀಡುವುದರ ಜೊತೆಗೆ ನವೀನ ಮಾದರಿಯ ಬ್ರಾಂಡ್ ಉತ್ಪನ್ನಗಳ ಪ್ರಯತ್ನಗಳನ್ನು ಮುಂದುವರಿಸುವAತೆ ಮಾರ್ಗದರ್ಶನ ನೀಡಿದರು. ಉತ್ಪನ್ನಗಳ ಆಕರ್ಷಕ ಬ್ರಾಂಡಿAಗ್ ಮತ್ತು ಗುಣಮಟ್ಟದ ಲೇಬಲಿಂಗ್ ಹಾಕುವ ಮೂಲಕ ಮಾರುಕಟ್ಟೆಯಲ್ಲಿ ಉತ್ತಮ ಸ್ಥಾನವನ್ನು ಪಡೆಯಬಹುದಾಗಿದೆ. ಎನ್.ಆರ್.ಎಲ್.ಎಂನ ಎಲ್ಲ ಸಿಬ್ಬಂದಿಗಳು ಹಾಗೂ ಸ್ವ-ಸಹಾಯಕ ಸಂಘಗಳ ಸದಸ್ಯರುಗಳು ಉತ್ತಮ ಸಮನ್ವಯದೊಂದಿಗೆ ಕೆಲಸ ಮಾಡುತ್ತಿರುವುದಕ್ಕೆ ತೃಪ್ತಿ ಹಾಗೂ ಪ್ರಶಂಸೆ ವ್ಯಕ್ತಪಡಿಸಿದರು. ಎನ್.ಆರ್.ಎಲ್.ಎಂ ಯೋಜನೆಯ ಯಶಸ್ಸಿಗೆ ಮತ್ತಷ್ಟು ಬಲ ನೀಡುವಂತಾಗಿದ್ದು, ಮುಂದಿನ ದಿನಗಳಲ್ಲಿ ಮಹಿಳಾ ಸ್ವ-ಉದ್ಯೋಗ ಮತ್ತು ಆದಾಯ ವೃದ್ದಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ನಂತರ ಪರಿಶೀಲನಾ ಸಭೆಯಲ್ಲಿ ಎನ್.ಆರ್.ಎಲ್.ಎಂ ಕಾರ್ಯಕ್ರಮಗಳ ಅನುಷ್ಠಾನ ಸ್ಥಿತಿ, ಸಾಧನೆಗಳು ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ವಿವರವಾದ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ವಿವಿಧ ಬ್ರಾಂಡ್ ಹಾಗೂ ಬ್ಯಾಗ್‌ಗಳನ್ನು ಪ್ರದರ್ಶನ ಮಾಡಲಾಯಿತು. ಸಭೆಯಲ್ಲಿ ಜಿ.ಪಂ ಸಹಾಯಕ ನಿರ್ದೇಶಕ ಎಸ್.ಎಂ.ಕಾಂಬಳೆ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ವಿವಿಧ ಸ್ವ-ಸಹಾಯ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.   

 

ಕಾಮೆಂಟ್‌ಗಳು