ಜಮಖಂಡಿ: ಜಮಖಂಡಿ ಆರೋಗ್ಯ ಇಲಾಖೆಯ ಮುಖ್ಯ ವೈದ್ಯಾಧಿಕಾರಿಗಳಿಂದ ಹೊರಗುತ್ತಿಗೆ ಸಿಬ್ಬಂದಿಯ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಹಾಗೂ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಎಲ್ಲಾ ಸಿಬ್ಬಂದಿಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ ಮತ್ತು ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಬಾಗಲಕೋಟೆ ಜಿಲ್ಲಾ ಘಟಕದ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಉದ್ಯೋಗ ಭದ್ರತೆ ನೀಡಬೇಕು, ಅವರನ್ನು ಕೆಲಸದಿಂದ ತೆಗೆಯುವ ಕ್ರಮಗಳನ್ನು ನಿಲ್ಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ರಾಜ್ಯದ ಎಲ್ಲ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಕನಿಷ್ಠ ವೇತನ ಹಾಗೂ ಸೇವಾ ಭದ್ರತೆ ಒದಗಿಸಬೇಕು. ದೌರ್ಜನ್ಯ ಘಟನೆಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಆಗ್ರಹಿಸಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಬಸವರಾಜ ಧರ್ಮಂತಿ (ಜಿಲ್ಲಾಧ್ಯಕ್ಷರು, ಬಾಗಲಕೋಟೆ), ಗಣೇಶ ನಾಯಕ (ಜಿಲ್ಲಾ ಪ್ರಧಾನ ಸಂಚಾಲಕ), ಗ್ವಾದಲೆಪ್ಪ ಚಲವಾದಿ (ಜಿಲ್ಲಾಧ್ಯಕ್ಷರು, ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘ, ಬಾಗಲಕೋಟೆ), ಅಬ್ದುಲ್ ಗಬ್ಬೂರ, ಮಂಜುನಾಥ್ ಪವಾರ, ಮಹಿಬೂಬ ಭೀಮನೂರ ಸೇರಿದಂತೆ ಅನೇಕ ನೌಕರರು ಹಾಗೂ ಕರವೇ ಮುಖಂಡರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ