ಬಾಗಲಕೋಟೆ:೨೦ ರಂದು ಗ್ಯಾರಂಟಿ ಉತ್ಸವ : ಸಿದ್ದತೆ ಪರಿಶೀಲನೆ

 ಬಾಗಲಕೋಟೆ : ನವನಗರದ ಜಿಲ್ಲಾ ಕಲಾಭವನದಲ್ಲಿ ಫೆಬ್ರವರಿ ೨೦ ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಹಾಗೂ ಉತ್ಸವ ಜರುಗಲಿದ್ದು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಬುಧವಾರ ಸಿದ್ದತಾ ಕಾರ್ಯವನ್ನು ಪರಿಶೀಲಿಸಿದರು. 

ಕಾರ್ಯಕ್ರಮದ ಮುಖ್ಯ ವೇದಿಕೆ, ಊಟದ ವ್ಯವಸ್ಥೆಯ ಸ್ಥಳ ಪರಿಶೀಲನೆ ಹಾಗೂ ಕಲಾಭವನದ ಮುಖ್ಯದ್ವಾರದ ಪಕ್ಕದಲ್ಲಿ ಹೆಚ್ಚುವರಿಯಾಗಿ ಬಂದ ಜನರಿಗೆ ಕಾರ್ಯಕ್ರಮ ವೀಕ್ಷಣೆಗೆ ಎಲ್‌ಇಡಿ ವ್ಯವಸ್ಥೆ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಂಚಗ್ಯಾರAಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಯೋಜನೆಗಳ ಸಂಪೂರ್ಣ ಮಾಹಿತಿಯುಳ್ಳ ಮಳಿಗೆಗಳನ್ನು ಅಚ್ಚುಕಟ್ಟಾಗಿ ಸಿದ್ದಪಡಿಸಲು ತಿಳಿಸಿದರು.

ಕಾರ್ಯಕ್ರಮಕ್ಕೆ ಒಂದು ದಿನ ಮಾತ್ರ ಬಾಕಿ ಉಳಿದಿದ್ದು, ಸಿದ್ದತೆಗಳನ್ನು ಪೂರ್ಣಗೊಳಿಸಲು ಸೂಚನೆ ನೀಡಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಪ್ರತಿಯೊಬ್ಬ ಫಲಾನುಭವಿಗಳಿಗೆ ಕೂಡುವ ವ್ಯವಸ್ಥೆ ಆಗಬೇಕು. ಸಮಯಕ್ಕೆ ಫಲಾನುಭವಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಧ್ಯಾಹ್ನದ ಊಟದ ವ್ಯವಸ್ಥೆ ಸೇರಿದಂತೆ ಇತರೆ ಕೆಲಸಗಳು ಅಚ್ಚುಕಟ್ಟಾಗಿ ನಡೆಯಬೇಕು. ಬಿಸಿಲು ಹೆಚ್ಚಾಗಿರುವದರಿಂದ ಊಟದ ಸ್ಥಳದಲ್ಲಿ ಶಾಮಿಯಾನ ಹಾಕಲು ತಿಳಿಸಿದರು. ಕಲಾಭವನದ ಸುತ್ತಲೂ ಸ್ವಚ್ಚತೆ ಕೈಗೊಳ್ಳಲು ನಗರಸಭೆ ಪೌರಾಯುಕ್ತರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿ.ಪಂ ಉಪ ಕಾಂiÀiðದರ್ಶಿ ಎನ್.ವಾಯ್.ಬಸರಿಗಿಡದ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ, ಜಿ.ಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಯೋಜನಾ ನಿರ್ದೇಶಕ ಎಸ್.ಎಂ.ಕಾAಬಳೆ, ಹೆಸ್ಕಾಂ ಅಧಿಕಾರಿಗಳು ಸೇರಿದಂತೆ ತಾಲೂಕಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಎಸ್.ಎಂ.ರಾAಪೂರ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು