ಬನಹಟ್ಟಿ: ಹಿಂದೂ ಸಮ್ಮೇಳನ ಸಂಚಾಲನಾ ಸಮಿತಿ ವತಿಯಿಂದ ಬನಹಟ್ಟಿ ನಗರದಲ್ಲಿ ಭವ್ಯವಾಗಿ ಆಯೋಜಿಸಲಾದ ಬೃಹತ್ ವಿರಾಟ್ ಹಿಂದೂ ಸಮ್ಮೇಳನ ಹಾಗೂ ಶೋಭಾಯಾತ್ರೆಯಲ್ಲಿ ಶಾಸಕ ಸಿದ್ದು ಸವದಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಭವ್ಯ ಪರಂಪರೆ, ಸಂಸ್ಕೃತಿ ಹಾಗೂ ಹಿಂದೂ ಸಮಾಜದ ಒಗ್ಗೂಡುವಿಕೆಯನ್ನು ಪ್ರತಿಬಿಂಬಿಸುವ ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಸಂತಸ ತಂದಿದೆ ಎಂದು ಹೇಳಿದರು. ಸಮ್ಮೇಳನದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಶೋಭಾಯಾತ್ರೆ ಹಾಗೂ ಜನರ ಭಾರೀ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.



ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ