ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ: ಕಠಿಣ ಪೊಲೀಸ್ ಬಂದೋಬಸ್ತ್

ಬಾಗಲಕೋಟೆ: ಶಿವಾಜಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.

ನಗರದಲ್ಲಿ ಈಗಾಗಲೇ ಶಾಂತಿ ನೆಲೆಸಿದ್ದು, ಶಾಲೆ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಧಿಕಾರಿಗಳ ಮನವಿಗೆ ಸ್ಪಂದಿಸಿದ ಪ್ರತಿಭಟನಾಕಾರರು ತಮ್ಮ ಹೋರಾಟದ ಸ್ಥಳವನ್ನು ಬದಲಿಸಿ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬಂದೋಬಸ್ತ್‌ಗಾಗಿ 5 ಎಸ್‌ಪಿ/ಅಡಿಷನಲ್ ಎಸ್‌ಪಿ ಹುದ್ದೆಯ ಅಧಿಕಾರಿಗಳು, 12 ಡಿವೈಎಸ್ಪಿಗಳು, 32 ಇನ್ಸ್‌ಪೆಕ್ಟರ್‌ಗಳು, 75 ಪಿಎಸ್‌ಐಗಳು ಹಾಗೂ 1,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ತಿಳಿಸಿದ್ದಾರೆ.

ಕಾಮೆಂಟ್‌ಗಳು