ಬಾಗಲಕೋಟೆ: ಮರ್ಡರ್ ಕೇಸಲ್ಲಿ ಮೂವರನ್ನು ವಶಕ್ಕೆ ಪಡೆದ ಪೊಲೀಸರು

ಬಾಗಲಕೋಟೆ : ಜನವರಿ 31ರಂದು ಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲೆ-ಕಾಲು ಇಲ್ಲದ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಕೇಸ್ ದಾಖಲಿಸಿ ವಿಚಾರಣೆಗಾಗಿ ಮೂವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹಿಳೆ ಶವ ಪತ್ತೆ ಬಳಿಕ ನಮ್ಮ ಸಿಬ್ಬಂದಿ ಪ್ರಕರಣ ಜಾಡು ಹಿಡಿದು ತನಿಖೆಗೆ ಮುಂದಾದಾಗ ಇದೊಂದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆ ಕೊಲೆ ಪ್ರಕರಣ ದಾಖಲಿಸಿ ಕೇಸ್ ಗೆ ಸಂಬಂಧಿಸಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ಹಂಚಿಕೊಂಡರು.

ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆ ವೇಳೆ ಎಲ್ಲ ಅಂಶಗಳು ಬಯಲಿಗೆ ಬರಲಿವೆ ಎಂದರು.

ಕಾಮೆಂಟ್‌ಗಳು