ಬಾಗಲಕೋಟೆ ಗಲಭೆ ಪ್ರಕರಣ: ಪೊಲೀಸರ ನಡೆ, ರಾಜ್ಯ ಸರ್ಕಾರದ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ

ಬಾಗಲಕೋಟೆ: ನಗರದಲ್ಲಿ   ಶಿವಾಜಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. 

ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಏಕಪಕ್ಷೀಯವಾಗಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು. ಮಸೀದಿಯಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಜನರು ಜಮಾಯಿಸಿದ್ದರೂ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ ಎಂಬ ವರದಿಗಳನ್ನು ಉಲ್ಲೇಖಿಸಿ, ಐಪಿಎಸ್ ಅಧಿಕಾರಿಗಳು ‘ಅಯೋಗ್ಯರ’ ಮಾತು ಕೇಳಬಾರದು ಎಂದು ಎಚ್ಚರಿಸಿದರು. ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅವರು ವಾಗ್ದಾಳಿ ನಡೆಸಿದರು.

ಕಾಮೆಂಟ್‌ಗಳು