ಬಾಗಲಕೋಟೆ: ನಗರದ ಯೂನಿಯನ್ ಆಫ್ ಮರ್ಚೆಂಟ್ ಅಸೋಸಿಯೇಷನ್ ವತಿಯಿಂದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮಲ್ಲಯ್ಯನ ಗುಡ್ಡದಲ್ಲಿರುವ ಮಲ್ಲಿಕಾರ್ಜುನ ದೇವಾಲಯದ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸುವಂತೆ ಮನವಿ ಸಲ್ಲಿಸಲಾಯಿತು.
ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರಮುಖವಾದ ಸೇತುವೆ ಹಾಗೂ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಘದ ಪದಾಧಿಕಾರಿಗಳು ಮನವಿ ಪತ್ರದಲ್ಲಿ ಒತ್ತಾಯಿಸಿದರು. ಈ ಮೂಲಕ ಭಕ್ತರು ಹಾಗೂ ಪ್ರವಾಸಿಗರಿಗೆ ಸುಗಮ ಸಂಚಾರ ಸೌಲಭ್ಯ ಒದಗಿಸಿ, ಸ್ಥಳೀಯ ಪ್ರದೇಶದ ಆರ್ಥಿಕ ಬೆಳವಣಿಗೆಗೂ ಉತ್ತೇಜನ ಸಿಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಸವೇಶ್ವರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ಬುಮಾ ಸಂಸ್ಥೆಯ ಮಾರ್ಗದರ್ಶಕರಾದ ಪ್ರಕಾಶ ತಪಶೆಟ್ಟಿ, ಸಂಘದ ಅಧ್ಯಕ್ಷ ರವಿ ಕುಮಟಗಿ, ಉಪಾಧ್ಯಕ್ಷ ಶ್ರೀನಿವಾಸ ಬಳ್ಳಾರಿ, ಜಂಟಿ ಕಾರ್ಯದರ್ಶಿ ಬಾಳು ಉಳ್ಳಾಗಡ್ಡಿ ಹಾಗೂ ಮಲ್ಲಾಪೂರ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ