ಬಾಗಲಕೋಟೆ:ಗ್ಯಾರಂಟಿ ಉತ್ಸವ ಯಶಸ್ವಿಗೆ ಅನೀಲ ದಡ್ಡಿ ಕರೆ

ಬಾಗಲಕೋಟೆ : ನವನಗರದ ಕಲಾಭವನದಲ್ಲಿ ಫೆಬ್ರವರಿ ೨೦ ರಂದು ಬೆಳಿಗ್ಗೆ ೧೧ ಗಂಟೆಗೆ ಜರುಗಲಿರುವ ಗ್ಯಾರಂಟಿ ಯೋಜನೆಯ ಕಾರ್ಯಾಗಾರ-ಉತ್ಸವ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಫಲಾನುಭವಿಗಳು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೆ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾದ್ಯಕ್ಷ ಅನೀಲಕುಮಾರ ದಡ್ಡಿ ಕರೆ ನೀಡಿದ್ದಾರೆ.

ಸರಕಾರ ಬಡವರಿಗಾಗಿ ಸಾಕಷ್ಟು ಕೆಲಸ ಮಾಡಿದೆ. ಗ್ಯಾರಂಟಿ ಯೋಜನೆಗಳ ಮೂಲಕ ನರವಾಗುತ್ತಿದೆ. ಜನರ ದುಡ್ಡನ್ನು ಪ್ರಾಮಾಣಿಕವಾಗಿ ಜನರ ಸೇವೆಗೆ ಬಳಸಲಾಗುತ್ತಿದೆ. ಸರಕಾರದ ಯೋಜನೆಗಳು ಹಾಗೂ ಗುರಿ ಜನರಿಗೆ ತಲುಪಿಸುವ ಐತಿಹಾಸಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ವಿಗೆ ಕಾರಣಿಭೂತರಾಗಬೇಕೆಂದು ಬಾಗಲಕೋಟೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ವಿನಂತಿಸಿಕೊಂಡಿದ್ದಾರೆ.

ಕಾಮೆಂಟ್‌ಗಳು