ಬೆಂಗಳೂರು: ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ, ರಾಜ್ಯದ ನಾಲ್ಕು ನಿಗಮಗಳ ಸಾರಿಗೆ ಬಸ್‌ಗಳು ಹಾಗೂ ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರ ಅಥವಾ ಪರೋಕ್ಷ ಯಾವುದೇ ಜಾಹೀರಾತುಗಳನ್ನು ತಕ್ಷಣದಿಂದಲೇ ನಿಷೇಧಿಸಲಾಗಿದೆ.
ಈ ಕುರಿತು ಸಾರಿಗೆ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿರುವ ರಾಮಲಿಂಗಾರೆಡ್ಡಿ, ಮುಂದಿನ ದಿನಗಳಲ್ಲಿ ಬಸ್‌ಗಳು ಮತ್ತು ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಯಾವುದೇ ರೂಪದಲ್ಲೂ ಪ್ರಚಾರ ಮಾಡಬಾರದು ಎಂದು ಆದೇಶಿಸಿದ್ದಾರೆ.
ಇದಲ್ಲದೆ, ಈಗಾಗಲೇ ಅಳವಡಿಸಿರುವ ತಂಬಾಕು ಜಾಹೀರಾತುಗಳನ್ನು ತೆರವುಗೊಳಿಸಲು ನಿರ್ದಿಷ್ಟ ಅವಧಿ ನಿಗದಿಪಡಿಸಿ, ಆ ಅವಧಿಯೊಳಗೆ ಸಂಪೂರ್ಣವಾಗಿ ತೆಗೆದುಹಾಕುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಠಿಣ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ.
ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಾಮಲಿಂಗಾರೆಡ್ಡಿ ಅವರು ಈ ವಿಷಯವನ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
#PetkarMedia #PetkarMediaFollow #KarnatakaNews #BengaluruNews #PublicHealth #NoTobacco #TransportNews #KSRTC #BMTC #NWKRTC #KKRTC #BreakingNews #KannadaNews
👉 ಇಂತಹ ನಿಖರ ಮತ್ತು ತಾಜಾ ಸುದ್ದಿಗಳಿಗೆ PetkarMedia ಫಾಲೋ ಮಾಡಿ
👉 Follow @PetkarMedia for latest Karnataka updates


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ