ಮುಧೋಳ: ತಾಲೂಕಿನ ರೂಗಿ ಗ್ರಾಮದಲ್ಲಿ ಇಂದು ರೂಗಿ–ಜುಂಜುರಕೊಪ್ಪ ಸಂಪರ್ಕ ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಈ ಭೂಮಿ ಪೂಜಾ ಕಾರ್ಯಕ್ರಮದಲ್ಲಿ ಅಬಕಾರಿ ಸಚಿವರು ಹಾಗೂ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವರಾದ ತಿಮ್ಮಾಪೂರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಭೂಮಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ತಿಮ್ಮಾಪೂರ ಅವರು, “ರೂಗಿ ಗ್ರಾಮದ ಜನರಿಗೆ ಉತ್ತಮ ಸಂಪರ್ಕ ಮಾರ್ಗಗಳು ದೊರೆಯುವುದು ಗ್ರಾಮೀಣ ಅಭಿವೃದ್ಧಿಯ ಮೂಲಭೂತ ಅಗತ್ಯವಾಗಿದೆ. ಈ 2 ಕಿ.ಮೀ. ಉದ್ದದ ಕಾಂಕ್ರೀಟ್ ರಸ್ತೆಯ ನಿರ್ಮಾಣದಿಂದ ಗ್ರಾಮಸ್ಥರಿಗೆ ಸಂಚಾರ ಸೌಲಭ್ಯ ಹೆಚ್ಚುವುದರ ಜೊತೆಗೆ ಶಿಕ್ಷಣ, ಆರೋಗ್ಯ, ಕೃಷಿ ಉತ್ಪನ್ನಗಳ ಸಾಗಾಟ ಮತ್ತು ದೈನಂದಿನ ಜೀವನ ಸುಗಮವಾಗಲಿದೆ. ದೇವಸ್ಥಾನದಿಂದ ಆರಂಭವಾಗುವ ಈ ರಸ್ತೆಯು ಭಕ್ತರ ಸಂಚಾರಕ್ಕೂ ಸಹಕಾರಿಯಾಗಲಿದೆ. ನಮ್ಮ ಸರ್ಕಾರ ಗ್ರಾಮೀಣ ಮೂಲಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ಇಂತಹ ಕಾಮಗಾರಿಗಳು ಶೀಘ್ರದಲ್ಲೇ ಪೂರ್ಣಗೊಂಡು ಜನರಿಗೆ ಪ್ರಯೋಜನ ನೀಡಲಿವೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕಿವಡಿ (ವಕೀಲರು), ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ತಿಪ್ಪಣ್ಣ ಬಟಕುರ್ಕಿ, ಮಂಜು ಉಪ್ಪಾರ, ಸದಾಶಿವ ಹೊಸಮನಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು, ಸ್ಥಳೀಯ ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ