ಜಮಖಂಡಿ: ಜಮಖಂಡಿ ನಗರದಲ್ಲಿ ಸ್ಲಂ ಬೋರ್ಡ್ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಈ ಯೋಜನೆ ನಮ್ಮ ಅವಧಿಯಲ್ಲಿ ಪೂರ್ಣಗೊಂಡಿದ್ದು, ಇದೀಗ ಕೇವಲ ವಿತರಣೆ ಕಾರ್ಯ ಮಾತ್ರ ನಡೆಯುತ್ತಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಜಗದೀಶ್ ಗುಡಗುಂಟಿ ಅವರು ಹಕ್ಕುಪತ್ರ ವಿತರಣೆ ಕಾರ್ಯವನ್ನು ತಾವೇ ಮಾಡಿರುವಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ ಈ ಹಕ್ಕುಪತ್ರಗಳ ಪ್ರಕ್ರಿಯೆ ನಮ್ಮ ಶಾಸಕರ ಅವಧಿಯಲ್ಲಿಯೇ ಪೂರ್ಣಗೊಂಡಿತ್ತು. ಈಗ ಕೇವಲ ವಿತರಣೆ ಮಾತ್ರ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ಜನರಿಗೆ ಸತ್ಯ ಗೊತ್ತಿದೆ. ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ಜಗದೀಶ್ ಗುಡಗುಂಟಿ ಅವರ ಸಾಧನೆ ಶೂನ್ಯವಾಗಿದೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಆರೋಪಿಸಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ