ತೇರದಾಳ: ಶಾಸಕ ಸಿದ್ದು ಸವದಿ ಅಮೃತಹಸ್ತದಿಂದ ದಿಗಂಬರೇಶ್ವರ ದೇವಾಲಯ ಕಲ್ಯಾಣಿ ಉದ್ಘಾಟನೆ

ರಬಕವಿ-ಬನಹಟ್ಟಿ: ತಾಲೂಕಿನ ಹಣಗಂಡಿ ಗ್ರಾಮದ ಸುಕ್ಷೇತ್ರ ಶ್ರೀ ದಿಗಂಬರೇಶ್ವರ ದೇವಸ್ಥಾನದ ಮುಂಭಾಗ ನಿರ್ಮಿಸಲಾದ ಕಲ್ಯಾಣಿ ಉದ್ಘಾಟನಾ ಕಾರ್ಯಕ್ರಮವು ಭಕ್ತಿಭಾವಪೂರ್ಣವಾಗಿ ನೆರವೇರಿತು.

 ತೇರದಾಳ ಮತಕ್ಷೇತ್ರದ ಶಾಸಕರಾದ  ಸಿದ್ದು ಸವದಿ ಅವರ ಹಾಗೂ ಪರಮ ಪೂಜ್ಯರ ಶ್ರೀಗಳ ಅಮೃತಹಸ್ತದಿಂದ ಕಲ್ಯಾಣಿಯನ್ನು ಉದ್ಘಾಟಿಸಲಾಯಿತು.

ನಾಲ್ಕು ವರ್ಷಗಳ ಹಿಂದೆ ಆಗಿನ ಬಿಜೆಪಿ ಸರ್ಕಾರದ ಪಂಚಾಯತ್ ರಾಜ್ ಸಚಿವರಾಗಿದ್ದ  ಕೆ.ಎಸ್. ಈಶ್ವರಪ್ಪ ಹಾಗೂ ಶಾಸಕ ಸಿದ್ದು ಸವದಿ ಅವರು ಈ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿದ್ದನ್ನು ಗ್ರಾಮಸ್ಥರು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಯುವಕರು ಹಾಗೂ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾಕ್ಷಿಯಾದರು. ದೇವಸ್ಥಾನದ ಅಭಿವೃದ್ಧಿಯಿಂದ ಗ್ರಾಮದಲ್ಲಿ ಆಧ್ಯಾತ್ಮಿಕ ಚಟುವಟಿಕೆಗಳು ಇನ್ನಷ್ಟು ವೃದ್ಧಿಯಾಗಲಿವೆ ಎಂದು ಭಕ್ತರು ಸಂತಸ ವ್ಯಕ್ತಪಡಿಸಿದರು.

ಕಾಮೆಂಟ್‌ಗಳು