ಜಮಖಂಡಿ: ಜಮಖಂಡಿ ಮತಕ್ಷೇತ್ರದ ಮಾಜಿ ಶಾಸಕರಾದ ಆನಂದ ನ್ಯಾಮಗೌಡ ಅವರು ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐಟಿ ಮತ್ತು ಬಿಟಿ ಇಲಾಖೆಯ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ಭೇಟಿ ಮಾಡಿ ಕ್ಷೇತ್ರದ ಅಭಿವೃದ್ಧಿ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.
ಈ ವೇಳೆ ಜಮಖಂಡಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಹಾಗೂ ಕೈಗೆತ್ತಿಕೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳು, ಮೂಲಸೌಕರ್ಯಗಳ ಬಲವರ್ಧನೆ, ಗ್ರಾಮೀಣ ಪ್ರದೇಶಗಳ ಸೌಲಭ್ಯಗಳ ವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ಸಚಿವರ ಗಮನಕ್ಕೆ ತಂದರು.
ಸಚಿವ ಪ್ರಿಯಾಂಕ ಖರ್ಗೆ ಅವರು ಕ್ಷೇತ್ರದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ತಿಳಿದುಬಂದಿದೆ.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ