ಬಾದಾಮಿ: ಸರ್ಕಾರದ ವಿವಿಧ ಯೋಜನೆಗಳಡಿ ಉಚಿತವಾಗಿ ವಿತರಿಸುವ ಅನ್ನಭಾಗ್ಯ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಹೆಚ್ಚಿನ ದರಕ್ಕೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ನಗರದ ಜನತಾ ಪ್ಲಾಟ್ ಮಸೀದಿ ಸಮೀಪದ ತಗಡಿನ ಶೆಡ್‌ನಲ್ಲಿ ಶುಕ್ರವಾರ ನಡೆದ ದಾಳಿಯಲ್ಲಿ ರೂ.6,960 ಮೌಲ್ಯದ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಬಾಗಲಕೋಟೆ ತಾಲೂಕಿನ ಸಿಕ್ಕೇರಿ ಕ್ರಾಸ್ ನಿವಾಸಿಗಳಾದ ವಿನೋದ ಲಮಾಣಿ ಮತ್ತು ಕಲ್ಪೇಶ್ ಚವ್ಹಾನ್ ಬಂಧಿತರು.
ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆಯ ನಿರೀಕ್ಷಕ ಮಂಜುನಾಥ ರೊಟ್ಟಿ ನೇತೃತ್ವದಲ್ಲಿ ಅನಿರೀಕ್ಷಿತ ದಾಳಿ ನಡೆಸಿ, ಸರ್ಕಾರದ ಅನುಮತಿ ಇಲ್ಲದೆ ಮಾರಾಟಕ್ಕೆ ಸಂಗ್ರಹಿಸಿದ್ದ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಇಬ್ಬರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ