ಬಾಗಲಕೋಟೆ:ಉಪ ಚುನಾವಣೆ : ಮತಗಟ್ಟೆ ಮಟ್ಟದ ಅಧಿಕಾರಿಗಳ ಸಭೆ

ಬಾಗಲಕೋಟೆ:  ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆಗೆ ಸಂಬಂಧಿಸಿದ, ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಸಂಗಪ್ಪ ಅವರ ಅಧ್ಯಕ್ಷತೆಯಲ್ಲಿ  ನವನಗರದ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳ ಸಭೆ ಜರುಗಿತು. 


ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾ ಚುನಾವಣಾಧಿಕಾರಿಗಳು ಮತದಾರರ ಪಟ್ಟಿಯಲ್ಲಿ ಯಾವುದೇ ಲೋಪದೋಷಗಳು ಇಲ್ಲದಂತೆ ಮತದಾರ ಪಟ್ಟಿಯನ್ನು ಪರಿಶೀಲಿಸಲು ತಿಳಿಸಿದರು. ಮತಗಟ್ಟೆ ಅಧಿಕಾರಿಗಳು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ಅಚ್ಚುಕಟ್ಟಾಗಿ ಕಾರ್ಯವನ್ನು ನಿರ್ವಹಿಸಬೇಕು. ಮತದಾರರ ಮಟ್ಟಿಯಲ್ಲಿ ಮರಣ ಹೊಂದಿದವರ ವಿವರಗಳನ್ನು ಪರಿಶೀಲಿಸುವ ಕಾರ್ಯವಾಗಬೇಕು ಎಂದರು.

ಮತದಾರರ ಪಟ್ಟಿಯಲ್ಲಿ ೮೫ಕ್ಕಿಂತ ಹೆಚ್ಚಿನ ಹಾಗೂ ೧೦೦ ವಯಸ್ಸಿನ ಮತದಾರರನ್ನು ಪರಿಶೀಲಿಸುವದರ ಜೊತೆಗೆ ಮತದಾರರ ಪಟ್ಟಿಯಲ್ಲಿ ಮತದಾರರ ವಿವರಗಳನ್ನು ಮ್ಯಾಪಿಂಗ್ ಮಾಡುವ ಕುರಿತು ಕ್ರಮವಹಿಸಲು ತಿಳಿಸಿದರು. ಮತಗಟ್ಟೆ ಮಟ್ಟದ ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯ ಒಂದು ಅಂಗವಾಗಿರುವದರಿAದ ಸದರಿ ಅಧಿಕಾರಿಗಳು ಚುನಾವಣೆಯಲ್ಲಿ ಮಹತ್ವದ ಕಾರ್ಯವನ್ನು ನಿರ್ವಹಿಸುತ್ತಿದ್ದು, ಚುನಾವಣೆಯು ಸುಗಮವಾಗಿ ಸಾಗಲು ತಮ್ಮ ಪಾತ್ರ ಸಹ ಮಹತ್ವವಾಗಿದೆ. ಯಾವುದೇ ರೀತಿಯಲ್ಲಿ ಲೋಪವಾಗದಂತೆ ಕ್ರಮವಹಿಸಲು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ.ಮನ್ನಿಕೇರಿ, ತಹಶೀಲ್ದಾರ ವಾಸುದೇವ ಸ್ವಾಮಿ. ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮೀನ್ ಕಿಲ್ಲೇದಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು