ಬಾಗಲಕೋಟೆ: ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಕಲ್ಲು ತೂರಾಟ, ತಳ್ಳುಗಾಡಿಗಳಿಗೆ ಬೆಂಕಿ

ಬಾಗಲಕೋಟೆ: ನಗರದ ಕಿಲ್ಲಾ ಓಣಿಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ದುಷ್ಕರ್ಮಿಗಳು ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ ಘಟನೆ ನಡೆದಿದೆ.


ಕಲ್ಲು ತೂರಾಟದ ನಡುವೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದು ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಿದೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ತಕ್ಷಣವೇ ಎಚ್ಚೆತ್ತು ಬೆಂಕಿ ನಂದಿಸಿ ಹೆಚ್ಚಿನ ಹಾನಿ ತಪ್ಪಿಸಿದ್ದಾರೆ.

ಘಟನೆ ಕುರಿತು ಬೇಸರ ವ್ಯಕ್ತಪಡಿಸಿದ ವ್ಯಾಪಾರಿ ಜನ್ನತಬಿ ದೊಡ್ಡಮನಿ ಅವರು, “ನಮ್ಮ ತಳ್ಳುಗಾಡಿ ಸುಟ್ಟಿದ್ದಾರೆ. ಅದರಲ್ಲಿ ಚಿಲ್ಲರೆ ಹಣ, ತಕ್ಕಡಿ ಸೇರಿದಂತೆ ಎಲ್ಲವೂ ಸುಟ್ಟು ಹೋಗಿದೆ. ಹೀಗೆ ಮಾಡಿದರೆ ಹೇಗೆ?” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಘಟನೆಯ ನಂತರ ಪ್ರದೇಶದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಕಾಮೆಂಟ್‌ಗಳು