ಮಾರ್ಚ್ 14ರಂದು ಬಾಗಲಕೋಟೆಗೆ ಸಿಎಂ ಸಿದ್ದರಾಮಯ್ಯ ಭೇಟಿ – ಸಚಿವ ತಿಮ್ಮಾಪುರ ಸ್ಥಳ ಪರಿಶೀಲನೆ

ಬಾಗಲಕೋಟೆ:ಮಾರ್ಚ್ 14ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಲಿದ್ದು, ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದ್ದಾರೆ.


ಶನಿವಾರ ನವನಗರದ ಸೆಕ್ಟರ್ ನಂ.1ರಲ್ಲಿ ನಡೆಯಲಿರುವ ಕಾರ್ಯಕ್ರಮದ ಸ್ಥಳವನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಬಾಗಲಕೋಟೆ ಜನತೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಬಹುಕಾಲದ ಆಶೆಯಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುತ್ತದೆ ಎಂದು ಹೇಳಿದರು.

 ಶಾಸಕರಾಗಿದ್ದ ದಿ. ಎಚ್.ವೈ. ಮೇಟಿ ಅವರ ಕನಸು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಾಗಲಕೋಟೆ ಜಿಲ್ಲೆಯ ಮೇಲಿರುವ ಪ್ರೀತಿಯಿಂದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಸಿಗಲಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಶಶೀಧರ ಕುರೇರ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ನಾರಾಯಣಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ ಎಂ., ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ, ನಗರಸಭೆ ಪೌರಾಯುಕ್ತ ವಾಸಣ್ಣ ಆರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು