ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಚುನಾವಣಾ ಪೂರ್ವ ಕಾರ್ಯಾಗಾರ ನಡೆಯಿತು. ರಾಜ್ಯ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿ ಶರಣು ತಳ್ಳಿಕೇರಿ ಮಾತನಾಡಿ, ಬಾಗಲಕೋಟೆ ಉಪಚುನಾವಣೆ 2028ರ ರಾಜ್ಯ ಚುನಾವಣೆಗೆ ದಿಕ್ಕು ತೋರಿಸಲಿದೆ ಎಂದು ಹೇಳಿದರು.
ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಜನತೆ ತಿರಸ್ಕರಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ 2028ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲಿದೆ ಎಂಬ ಸಂದೇಶ ನೀಡೋಣ ಎಂದು ಅವರು ಕಾರ್ಯಕರ್ತರಿಗೆ ಕರೆ ನೀಡಿದರು.
ಬೆಳಗಾವಿ ವಿಭಾಗದ ಪ್ರಭಾರಿ ಸಂಜಯ ಪಾಟೀಲ ಮಾತನಾಡಿ, ಬಾಗಲಕೋಟೆ ಉಪಚುನಾವಣೆ ಒಂದು “ಧರ್ಮಯುದ್ಧ” ಎಂದು ಹೇಳಿ ಬಿಜೆಪಿ ಗೆಲುವು ಶತಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಾಗಾರದಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಿಸ್ತಾರಕರು ಸೇರಿದಂತೆ 500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ